ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು ಬ್ರಹ್ಮ ರಥೋತ್ಸವ ದೇವಾಲಯದ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.
ಕೋವಿಡ್ ತಡೆಗಟ್ಟಲು ಘೋಷಿಸಲಾದ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ದೇವಲಯ ಹಾಗೂ ರಥೋತ್ಸವಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಶಾಸಕರಾದ ಟಿ.ವೆಂಕಟರಮಣಯ್ಯ, ನಿಸರ್ಗನಾರಾಯಣಸ್ವಾಮಿ, ತಹಶೀಲ್ದಾರ್ ಮೋಹನಕುಮಾರಿ, ಮುಜಾರಿಯಿ ಇಲಾಖೆ ಸಹಾಯಕ ಆಯುಕ್ತೆ ಹೇಮಾವತಿ, ಇಒ ನಾಗಾರಾಜ್, ಜಿಪಂ ಮಾಜಿ ಸದಸ್ಯ ಅಪ್ಪಯ್ಯಣ್ಣ ಹಾಜರಿದ್ದರು.
ಪ್ರಭಾವಿಗಳಿಗೆ ಅನ್ವಯಿಸದ ನಿರ್ಬಂಧ..!: ಓಮಿಕ್ರಾನ್ ತಡೆಗಟ್ಟಲು ಜಾರಿಗೆ ತಂದಿರುವ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಬ್ರಹ್ಮರಥೋತ್ಸವದಲ್ಲಿ ಗಣ್ಯರು, ಅರ್ಚಕರು ಹಾಗೂ ಸಿಬ್ಬಂದಿಗಳು ಸೇರಿ ಜಿಲ್ಲಾಡಳಿತ ಕೇವಲ 50 ಮಂದಿಗೆ ಮಾತ್ರ ಅವಕಾಶ ನೀಡಿದೆ. ಆದರೆ ಬ್ರಹ್ಮರಥೋತ್ಸವದಲ್ಲಿ ಅನೇಕ ಪ್ರಭಾವಿಗಳು, ಬೆಂಬಲಿಗರು ಭಾಗವಹಿಸಿದ್ದು, ಕೋವಿಡ್ ನಿಯಮ, ನಿರ್ಬಂಧ ಕೇವಲ ಜನಸಾಮಾನ್ಯರಿಗೆ ಅಷ್ಟೆ ಹೊರತು ಪ್ರಭಾವಿಗಳಿಗಲ್ಲ ಎಂಬ ಆಕ್ಷೇಪ ಭಕ್ತರಿಂದ ಕೇಳಿಬಂದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….