ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ಬೆಂ.ಗ್ರಾ.ಜಿಲ್ಲೆ: ರಾಷ್ಟ್ರೀಯ ಪಲ್ಸ್ ಪೋಲಿಯೋ-2022ರ ಲಸಿಕಾ ಕಾರ್ಯಕ್ರಮವು ಜನವರಿ 23 ರಿಂದ 26ರವರೆಗೆ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ‌ಜಿಲ್ಲೆಯ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಲು ಹಾಗೂ ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚಿಸಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2022ನೇ ಸಾಲಿನ “ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ”ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 106274 ಐದು ವರ್ಷದೊಳಗಿನ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ ಎಂದರು.

2022ರ ಜನವರಿ 23ರಂದು ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಬೂತ್‌ಗಳಲ್ಲಿ ಲಸಿಕಾ ನೀಡಲಾಗುವುದು. ಜನವರಿ 24 ರಿಂದ 25 ರವರೆಗೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹಾಗೂ ಜನವರಿ 24 ರಿಂದ 26 ರವರೆಗೆ ಜಿಲ್ಲೆಯ ನಗರ ಪ್ರದೇಶಗಳಲ್ಲಿ  ಮನೆ ಮನೆಗೆ ಭೇಟಿ ನೀಡಿ, ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುವುದು ಎಂದರು.

ಭಾರತ ಈಗಾಗಲೇ ಪೋಲಿಯೋ ನಿರ್ಮೂಲನಾ ದೇಶವಾಗಿದ್ದರೂ ಕೂಡ ಭವಿಷ್ಯದ ಮುನ್ನೆಚ್ಚರಿಕೆಯ ಉದ್ದೇಶದಿಂದ ಜನವರಿ 23 ರಿಂದ ಆರಂಭವಾಗಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ 0-5 ವರ್ಷದೊಳಗಿನ ಯಾವೊಂದು ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬೇರೆ ಜಿಲ್ಲೆಯಿಂದ ವಲಸೆ ಬಂದಿರುವ ಎಲ್ಲಾ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ತಲುಪಿಸುವ ಉದ್ದೇಶದಿಂದ ರೈಲು ನಿಲ್ದಾಣ, ಬಸ್ ನಿಲ್ದಾಣ, ವಿಮಾನ ನಿಲ್ದಾಣದ ಆಗಮನ ಮತ್ತು ನಿರ್ಗಮನದ ಸ್ಥಳಗಳಲ್ಲಿ, ಟೋಲ್ ಪ್ಲಾಜಾಗಳಲ್ಲಿ, ಪೋಲಿಯೋ ಲಸಿಕಾ ಬೂತ್‍ಗಳು ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನಲ್ಲಿ 22424, ಹೊಸಕೋಟೆ ತಾಲ್ಲೂಕಿನಲ್ಲಿ 29584,  ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 30995 ಮತ್ತು ನೆಲಮಂಗಲ ತಾಲ್ಲೂಕಿನಲ್ಲಿ 23271 ಮಕ್ಕಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 106274 ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.    ದೇವನಹಳ್ಳಿ ತಾಲ್ಲೂಕಿನಲ್ಲಿ 107 ಬೂತ್‍ಗಳಿಗೆ 428 ಸಿಬ್ಬಂದಿಗಳು 23 ಸೂಪರ್‌ವೈಸರ್ಸ್, ಹೊಸಕೋಟೆ ತಾಲ್ಲೂಕಿನಲ್ಲಿ 114 ಬೂತ್‍ಗಳಿಗೆ 456 ಸಿಬ್ಬಂದಿಗಳು 22 ಸೂಪರ್‌ವೈಸರ್ಸ್, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 153 ಬೂತ್‍ಗಳಿಗೆ 612 ಸಿಬ್ಬಂದಿಗಳು 30 ಸೂಪರ್‌ವೈಸರ್ಸ್ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 92 ಬೂತ್‍ಗಳಿಗೆ 368 ಸಿಬ್ಬಂದಿಗಳು 18 ಸೂಪರ್‌ವೈಸರ್ಸ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 466 ಲಸಿಕಾ ಬೂತ್‍ಗಳಲ್ಲಿ 1864 ಸಿಬ್ಬಂದಿಗಳು 93 ಸೂಪರ್‌ವೈಸರ್ಸ್‌ಗಳು ಹಾಗೂ 91 ಸಂಚಾರಿ ಬೂತ್‍ಗಳಲ್ಲಿ 182 ಸಿಬ್ಬಂದಿಗಳು 9 ಸೂಪರ್‌ವೈಸರ್ಸ್‌ಗಳನ್ನು ನಿಯೋಜನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ನಗರ ಸಭೆ/ಪುರಸಭೆಗಳ ವ್ಯಾಪ್ತಿಯಲ್ಲಿ, ಕೊಳಚೆ ಮತ್ತು ಇತರೆ ಹೆಚ್.ಆರ್.ಎ ಪ್ರದೇಶಗಳಲ್ಲಿ ಆಟೋಗಳ ಮೂಲಕ ಎರಡು ದಿನಗಳ ಮುಂಚಿತವಾಗಿ ಪ್ರಚಾರ ಮಾಡಲು ತಿಳಿಸಿದರಲ್ಲದೆ, ಆ ಪ್ರದೇಶಗಳಲ್ಲಿ ಬ್ಯಾನರ್‌ಗಳನ್ನು ಹಾಕಿಸುವುದು, ಭಿತ್ತಿಪತ್ರಗಳನ್ನು ಮುದ್ರಿಸಿ ಪ್ರದರ್ಶಿಸಲು ತಿಳಿಸಿದರು.

ಮನೆ ಮನೆ ಭೇಟಿ ನೀಡಿ, ಮಕ್ಕಳನ್ನು ಹುಡುಕಿ ಪೋಲಿಯೋ ಹನಿ ಹಾಕುವ ಕಾರ್ಯಕ್ರಮದ ಸಲುವಾಗಿ ಲಸಿಕಾ ಕಾರ್ಯಕರ್ತರಿಗೂ ಹಾಗೂ ಮೇಲ್ವಿಚಾರಕರಿಗೂ ನಗರಸಭೆ ಹಾಗೂ ಪುರಸಭೆ ವತಿಯಿಂದ ಆಟೋಗಳನ್ನು ಒದಗಿಸಲು ತಿಳಿಸಿದರಲ್ಲದೆ, ಜಾಥಾಗಳನ್ನು ಏರ್ಪಡಿಸುವುದರ ಮೂಲಕ ಜನಜಾಗೃತಿ ಉಂಟುಮಾಡಲು ತಿಳಿಸಿದರು.

ಜಿಲ್ಲೆಗೆ ಹೊರ ರಾಜ್ಯಗಳಿಂದ ಬಂದಿರುವ ಅಲೆಮಾರಿ ಜನಾಂಗ, ವಲಸಿಗರು,ಇಟ್ಟಿಗೆ ಗೂಡಿನ ಕಾರ್ಮಿಕರು, ಕೃಷಿ ಕಾರ್ಮಿಕ ಕುಟುಂಬಗಳಲ್ಲಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಲು ತಿಳುವಳಿಕೆ ನೀಡಿ, ಪೋಲಿಯೋ ಬೂತ್‌ಗಳಿಗೆ ತೆರಳಿ ಲಸಿಕೆ ಹಾಕಿಸಿಕೊಳ್ಳಲು ಮನವೊಲಿಸಬೇಕು ಎಂದರಲ್ಲದೆ, ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಕಟ್ಟಡಗಳ ಮಾಲೀಕರನ್ನು ಮತ್ತು ಮೇಸ್ತ್ರಿಗಳನ್ನು ಸಂಪರ್ಕಿಸಿ, ಕೂಲಿ ಕಾರ್ಮಿಕ ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಬೇಕು ಎಂದರು.

ಶಾಲಾ ಆರೋಗ್ಯ ತಂಡಗಳ ವೈದ್ಯರು, ಶಾಲಾ ಶಿಕ್ಷಕರಿಗೆ ಮತ್ತು ಶಾಲಾ ಮಕ್ಕಳಿಗೆ ತಮ್ಮ ತಮ್ಮ ಮನೆಯಲ್ಲಿರುವ ಮತ್ತು ಪಕ್ಕದ ಮನೆಗಳಲ್ಲಿರುವ 0-5 ವರ್ಷದ ಮಕ್ಕಳಿಗೆ ಲಸಿಕೆ ಹಾಕಿಸಲು ತಿಳಿಸಬೇಕೆಂದರಲ್ಲದೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅಗತ್ಯ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಹೇಳಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಸ್ಕಾಂ, ಪ್ರಾದೇಶಿಕ ಸಾರಿಗೆ ಇಲಾಖೆಗಳ ಪಾತ್ರ ಮಹತ್ವವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕೆಂದು ನಿರ್ದೇಶಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ‌ ನಿರ್ದೇಶಕಿ ಸುಮ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಬಂಧಿಸಿದ ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಿಎಂ ಕುರ್ಚಿ ಮೇಲೆ JDU ಟವೆಲ್, ಆದರೆ ಟ್ವೀಟ್ ಡಿಲೀಟ್ ಮಾಡಿದ್ದೇಕೆ..?!

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಿಎಂ ಕುರ್ಚಿ ಮೇಲೆ JDU ಟವೆಲ್, ಆದರೆ

ಮಹಿಳೆಯರ ಖಾತೆಗೆ 10 ಸಾವಿರ, ಮನೆಗೊಂದು ಸರ್ಕಾರಿ ನೌಕರಿ ಘೋಷಣೆ, ವೋಟ್ ಚೋರಿ ಆರೋಪ, ನಿರುದ್ಯೋಗ ಸಮಸ್ಯೆ ಆರೋಪ ಸೇರಿದಂತೆ ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election)ಯಲ್ಲಿ NDA ಮೈತ್ರಿಕೂಟ

[ccc_my_favorite_select_button post_id="116212"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!