ಮೇಷ: ಗ್ರಹಗಳ ಶುಭ ದೃಷ್ಟಿ, ಶುಭವಾಗಿ ಶುಭಫಲಗಳು ಕಂಡುಬರುವುದು. ನೌಕರರ ತೊಂದರೆಗಳು ನಿವಾರಣೆ ಯಾಗುವುದು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ಕೊಟ್ಟಸಾಲ ಪಾವತಿಯಾಗುವುದು.
ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯಾ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವುದು.
ಮಿಥುನ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ.
ಕಟಕ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ.ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ.
ಸಿಂಹ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಕನ್ಯಾ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಿಮಗೆ ಯೋಗ್ಯ ಸಮ್ಮಾನ ದೊರೆಯುವುದು.
ತುಲಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವುದು.
ವೃಶ್ಚಿಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ.
ಧನಸ್ಸು: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಮಕರ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು.
ಕುಂಭ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.
ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿವ೯ಹಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.
ತಿಥಿ: ಸಪ್ತಮಿ
ನಕ್ಷತ್ರ: ಉತ್ತರಭಾದ್ರ ನಕ್ಷತ್ರ
ಈ ದಿನದ ವಿಶೇಷ: ಸಂತ ಶ್ರೀಗುರು ಅನಂತಸ್ವಾಮಿ ಯವರ ಪುಣ್ಯದಿನ.
ರಾಹುಕಾಲ: 04:48 ರಿಂದ 06:14
ಗುಳಿಕಕಾಲ: 03:22 ರಿಂದ 04:48
ಯಮಗಂಡಕಾಲ: 12:30 ರಿಂದ 01:56
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….