
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಸಾಹಿತಿ, ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಚಂದ್ರಶೇಖರ ಪಾಟೀಲ್ (ಚಂಪಾ) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
83 ವರ್ಷದ ಚಂಪಾ ಅವರು ಅನಾರೋಗ್ಯ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ನಿಧನರಾಗಿರುವುದಾಗಿ ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೆಲ ಸಮಯದಲ್ಲಿ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗುತ್ತದೆವೆನ್ಬಲಾಗಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ ಚಂಪಾ ಅವರು 1939ರ ಜೂನ್ 18ರಂದು ಜನ್ಮಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಇಂಗ್ಲಿಷ್ ಎಂ.ಎ. ಪದವಿ ಗಳಿಸಿದ್ದರಲ್ಲದೆ ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾ ಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೊಮಾ ಪಡೆದರು.
ಚಂದ್ರಶೇಖರ ಪಾಟೀಲರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….