ಕೋವಿಡ್ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ: ಸಂಸದ ಬಿ.ಎನ್.ಬಚ್ಚೇಗೌಡ

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಮೂರನೇ ಅಲೆಯ ತೀವ್ರತೆ ತಡೆಯಲು, ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ, ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಿ, ಲಸಿಕಾಕರಣವನ್ನು ವೇಗಗೊಳಿಸುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಅಧಿಕಾರಿಗಳು, ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ “2021-22ನೇ ಸಾಲಿನ ದಿಶಾ ಪ್ರಗತಿ ಪರಿಶೀಲನಾ ಸಭೆ” ಹಾಗೂ “ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಗಣಗಲೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾಮಗಾರಿಗಳ ಅಭಿವೃದ್ಧಿ ಯೋಜನೆಯ(ವಿ.ಡಿ.ಪಿ) ಕುರಿತು ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 95.5 ರಷ್ಟು (ರಾಜ್ಯದಲ್ಲಿ 12ನೇ ಸ್ಥಾನ) ಮೊದಲ ಡೋಸ್ ಹಾಗೂ ಶೇ. 85.9 ರಷ್ಟು (5ನೇ ಸ್ಥಾನ) ಎರಡನೇ ಡೋಸ್ ಕೋವಿಡ್ ಲಸಿಕಾಕರಣವು ಪ್ರಗತಿಯಾಗಿದ್ದು, ನೂರರಷ್ಟು ಪ್ರಗತಿಯನ್ನು ಅತಿ ಶೀಘ್ರವಾಗಿ ಸಾಧಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದೆ. 15 ರಿಂದ 18 ವರ್ಷದೊಳಗಿನ 48865 ಮಕ್ಕಳು ಜಿಲ್ಲೆಯಲ್ಲಿದ್ದು, ಈ ಪೈಕಿ 23190 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಹತ್ತು ದಿನಗಳಲ್ಲಿ ಶೇ. 47.5 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರಲ್ಲದೆ, ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮೂರನೇ ಡೋಸ್ ಲಸಿಕಾಕರಣ ಕಾರ್ಯಕ್ರಮ ಆರಂಭಗೊಂಡಿದ್ದು, ವೇಗವಾಗಿ ಪ್ರಗತಿ ಸಾಧಿಸಬೇಕೆಂದು ತಿಳಿಸಿದರು.

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ನಿರ್ದೇಶನದಂತೆ 15ನೇ ಹಣಕಾಸು ಯೋಜನೆಯ ಅನುದಾನವನ್ನು ಗ್ರಾಮ ಪಂಚಾಯಿತಿಗಳಲ್ಲಿ ಮಾಸ್ಕ್ ವಿತರಣೆಗೆ, ಗ್ರಾಮಗಳಲ್ಲಿ ಸ್ಯಾನಿಟೇಜೇಷನ್ ಮಾಡಲು, ಚರಂಡಿ ಸ್ವಚ್ಚತೆಗೆ, ಘನತ್ಯಾಜ್ಯ ವಿಲೇವಾರಿ ವಾಹನ ಖರೀದಿ ಸೇರಿದಂತೆ ಇನ್ನಿತರ ಕೋವಿಡ್ ನಿಯಂತ್ರಣ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಬಹುದಾಗಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉದಾಸೀನ ತೋರದೇ ಜವಾಬ್ದಾರಿಯುತವಾಗಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಸ್ವ-ಇಚ್ಛೆಯಿಂದ ನೀಲಗಿರಿ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಅಂದೋಲನದ ಮೂಲಕ ರೈತರಲ್ಲಿ ಅರಿವು ಮೂಡಿಸಿ, ತ್ವರಿತವಾಗಿ ತೆರವುಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರಲ್ಲದೆ ನೀಲಗಿರಿ ತೆರವು ಜಾಗದಲ್ಲಿ ಮಹಾಗನಿ, ಹೆಬ್ಬೇವು, ತೆಂಗು, ರಕ್ತಚಂದನ ಇನ್ನಿತರ ಸಸಿಗಳನ್ನು ಬೆಳೆಸುವಂತೆ ರೈತರನ್ನು ಉತ್ತೇಜಿಸಬೇಕು ಹಾಗೂ ತೆರವುಗೊಳಿಸಲಾದ ನೀಲಗಿರಿ ಮರಗಳ ಸಂಖ್ಯೆ, ರೈತರಿಗೆ ವಿತರಿಸಲಾದ ಇತರೆ ಸಸಿಗಳ ಸಂಖ್ಯೆ ಮತ್ತು ರೈತರು ಹೊಸದಾಗಿ ನೆಟ್ಟ ಸಸಿಗಳ ಸಂಖ್ಯೆ ಅಂಕಿ-ಅಂಶಗಳ ಮಾಹಿತಿಯನ್ನು ಸಂಗ್ರಹಿಸಲು ಅರಣ್ಯ ಇಲಾಖೆಯು ಕ್ರಮ ವಹಿಸಬೇಕು ಎಂದರು.

ಕೆರೆಯಂಗಳದಲ್ಲಿ ಬೆಳೆದಿರುವ ಜಾಲಿ ಮರಗಳನ್ನು ಹರಾಜು ಪ್ರಕ್ರಿಯೆ ಮೂಲಕ ತೆರವುಗೊಳಿಸಿ, ಅದರಿಂದ ಬರುವ ಆದಾಯವನ್ನು ಸ್ಥಳೀಯ ಸಂಸ್ಥೆಗಳಿಗೆ ಅಥವಾ ಸರ್ಕಾರಕ್ಕೆ ಸಂದಾಯ ಮಾಡಬೇಕು ಎಂದು ತಿಳಿಸಿದರು.

ಬೇಸಿಗೆ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಶಾಸಕರಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿ, ಹೆಚ್ಚಿನ ಅನುದಾನ ತರುವ ಮೂಲಕ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಜಾಗ ನೀಡಲಾಗಿದ್ದು, ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮ ಪಂಚಾಯಿತಿಗಳು ಅರಿವು ಮೂಡಿಸಿ ಸ್ವಚ್ಛತಾ ಕ್ರಮಗಳ ಅನುಸರಣೆ ಕುರಿತ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಅಥವಾ ಆನ್‌ಲೈನ್ ಮೂಲಕ ತರಗತಿಗಳನ್ನು ಉತ್ತಮವಾಗಿ ನಡೆಸಬೇಕು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೋವಿಡ್ ನಿಯಮಾನುಸಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆಗಳನ್ನು ನಡೆಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮಳೆ ಹಾನಿ ಹಾಗೂ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ವಿಳಂಬ ತೋರದೆ, ಶೀಘ್ರ ಪರಿಹಾರ ನೀಡಬೇಕು ಎಂದು ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ರೇಷ್ಮೆ, ತೋಟಗಾರಿಕೆ ಬೆಳೆಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನು ಪೂರ್ಣವಾಗಿ ಅನುಷ್ಠಾನಗೊಳಿಸಿ ಶಿಶು ಹಾಗೂ ತಾಯಂದಿರ ಮರಣ ಪ್ರಮಾಣ ಮತ್ತು ಅಪೌಷ್ಟಿಕತೆ ಪ್ರಮಾಣ ತಗ್ಗಿಸಬೇಕು. ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಕಾರ್ಯಕ್ರಮದಲ್ಲಿ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದರಲ್ಲದೆ, ಹೊಸದಾಗಿ ಜಾರಿಗೆ ತಂದಿರುವ ರೈತ ಮಕ್ಕಳಿಗೆ ನೀಡಲಾಗುವ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಕೃಷಿ ಇಲಾಖೆಯು ಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ರಸ್ತೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಲಾದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಲಾಗಿದೆ ಎಂದ ಸಂಸದರು, ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಂಡು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಜಿಪಂ ಉಪ ಕಾರ್ಯದರ್ಶಿ ಸಿ.ಎಂ.ಮುನಿಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ನರಸಿಂಹ.ಎಂ.ಆರ್, ಮುಖ್ಯ ಲೆಕ್ಕಾಧಿಕಾರಿ ರಮೇಶರೆಡ್ಡಿ, ಯೋಜನಾ ನಿರ್ದೇಶಕ ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳು, ತಹಶೀಲ್ದಾರ್‌ಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ನಂತರ ಸಂಸದರು ದಿಶಾ ಸಮಿತಿ ಸದಸ್ಯರುಗಳಿಗೆ ಗುರುತಿನ ಚೀಟಿ ವಿತರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ವಿಮಾನ ಪತನ; ನಾಸ್ಕರ್‌ನ ಮಾಜಿ ಚಾಲಕ, ಅವರ ಕುಟುಂಬ ಸೇರಿದಂತೆ ಏಳು ಸಾವು

ವಿಮಾನ ಪತನ; ನಾಸ್ಕರ್‌ನ ಮಾಜಿ ಚಾಲಕ, ಅವರ ಕುಟುಂಬ ಸೇರಿದಂತೆ ಏಳು ಸಾವು

ಉತ್ತರ ಕೆರೊಲಿನಾದ ಪ್ರಾದೇಶಿಕ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ (Plane crash) ಸಾವನ್ನಪ್ಪಿದ ಏಳು ಜನರಲ್ಲಿ ಮಾಜಿ ನಾಸ್ಕರ್ ಚಾಲಕ ಮತ್ತು ಅವರ ಕುಟುಂಬ ಸೇರಿದೆ ಎಂದು ಕಾರು ರೇಸಿಂಗ್ ಸಂಸ್ಥೆ ತಿಳಿಸಿದೆ.

[ccc_my_favorite_select_button post_id="117528"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!