ಚಂಪಾ ಅಗಲಿಕೆಗೆ ಬೆಂ.ಗ್ರಾ.ಜಿಲ್ಲೆ ಕಸಾಪ ಅಧ್ಯಕ್ಷರ ಸಂತಾಪ: ದೊಡ್ಡಬಳ್ಳಾಪುರದಲ್ಲಿಂದು ನುಡಿ ನಮನ

ಬೆಂ.ಗ್ರಾ.ಜಿಲ್ಲೆ: ಕನ್ನಡ ಸಾಹಿತ್ಯ ಪರಿಷತ್ತಿನ‌ ಮಾಜಿ ಅಧ್ಯಕ್ಷ, ಸಾಹಿತಿ, ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಚಂದ್ರಶೇಖರ ಪಾಟೀಲ್ (ಚಂಪಾ) ಅವರ ಅಗಲಿಕೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹಾಗೂ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು ಸಂತಾಪ ಸೂಚಿಸಿದ್ದಾರೆ.

ಶ್ರೀಯುತರ ಅಗಲಿಕೆಯಿಂದ ನಮ್ಮ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ  ನಷ್ಟ ಉಂಟಾಗಿದೆ. ಅವರ ಸಾಹಿತ್ಯ ಕೃಷಿ, ಸೇವೆ  ನಮ್ಮೆಲ್ಲರಿಗೂ ದಾರಿದೀಪವಾಗಿತ್ತು ಶ್ರೀಯುತರಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ ವರ್ಗಕ್ಕೆ ದುಖಃ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ನಮ್ಮ ಜಿಲ್ಲಾ ಕಸಾಪ ಬಳಗದಿಂದ ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾಧ್ಯಕ್ಷ ಬಿ.ಎನ್.ಕೃಷ್ಣಪ್ಪ ಸಂತಾಪ ಸೂಚಿಸಿದ್ದಾರೆ.

ಕನ್ನಡದ ಹೆಸರಾಂತ ಸಮಾಜವಾದಿ ಲೇಖಕ, ಚಿಂತಕ, ಸಂಕ್ರಮಣ ಸಾಹಿತ್ಯ ಪತ್ರಿಕೆಯ ಸಂಪಾದಕ ಪ್ರೊ.ಚಂದ್ರಶೇಖರ ಪಾಟೀಲ್ ಅವರ ನಮ್ಮನ್ನು ಅಗಲಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪಿ.ಗೋವಿಂದರಾಜು ಸಂತಾಪ ಸೂಚಿಸಿದ್ದಾರೆ.

ಬಂಡಾಯ ಸಾಹಿತ್ಯ ಸಂಘಟನೆಯ ಪ್ರಮುಖ ರೂವಾರಿಗಳಲ್ಲೊಬ್ಬರಾಗಿ, ದಲಿತ ಸಂಘರ್ಷ ಸಮಿತಿ ಹಾಗೂ ರೈತ ಚಳವಳಿಯ ಹಿತೈಷಿ ಸ್ನೇಹಿಯಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಪರ್ಯಾಯ ರಾಜಕಾರಣದ ಚಿಂತಕರಾಗಿ, ಕವಿ- ನಾಟಕಕಾರ – ವಿಮರ್ಶಕ- ಅಂಕಣಕಾರರಾಗಿ  ಡಾ.ಚಂದ್ರಶೇಖರ ಪಾಟೀಲರು  ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಕೊಟ್ಟ ಕೊಡುಗೆ ಅನನ್ಯವಾಗಿದೆ.

ಗೋಕಾಕ್ ಚಳುವಳಿಯ  ಸಂದರ್ಭದಲ್ಲಿ ತಮ್ಮ ಗುರುಗಳಾದ ಡಾ.ವಿ.ಕೃ.ಗೋಕಾಕ್ ಅವರಿಗೆ ಗೋಕಾಕ್ ಗೋ ಬ್ಯಾಕ್ ಎಂದು ಪ್ರತಿಭಟಿಸಿದ್ದರು.

‘ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ’ ಎಂದು ಕರೆ ಕೊಟ್ಟಿದ್ದ ಚಂದ್ರಶೇಖರ ಪಾಟೀಲ್ ಅವರು ಗೋಕಾಕ್ ಚಳುವಳಿಗೆ  ವರನಟ ಡಾ.ರಾಜ್ ಕುಮಾರ್ ಭಾಗವಹಿಸುವಂತೆ ಮಾಡುವಲ್ಲಿ ಪ್ರಮುಖ ಪತ್ರ ವಹಿಸಿದ್ದರು.

ಕನ್ನಡ ಸಾಹಿತ್ಯ  ‘ಪಂಪ ನಿಂದ ಚಂಪಾ ತನಕ ‘ ಎಂದು ಪಿ.ಲಂಕೇಶ್ ಅವರು ಕೊಟ್ಟ ವಿಡಂಬನಾತ್ಮಕ ಬಿರುದಿಗೆ ಉತ್ತರ ಕೊಟ್ಟಿದ್ದರು ಎಂದು ಗೋವಿಂದರಾಜು ಸ್ಮರಿಸಿದ್ದಾರೆ.

ಇಂದು ಸಂಜೆ ನುಡಿನಮನ: ಖ್ಯಾತ ಸಾಹಿತಿ ಡಾ.ಚಂದ್ರಶೇಖರ ಪಾಟೀಲ್ ಅವರ ನಿಧನ ಪ್ರಯುಕ್ತ ನುಡಿ ನಮನ ಕಾರ್ಯಕ್ರಮ ಇಂದು ಸಂಜೆ 4 ಗಂಟೆಗೆ ಕನ್ನಡ ಜಾಗೃತ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕಿನ ಎಲ್ಲಾ ಕನ್ನಡಪರ ಸಂಘಟನೆಗಳು, ಸಾಹಿತ್ಯಾಸಕ್ತರು, ಜನಪರಸಂಘಟನೆಗಳು, ಪತ್ರಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು ವಿನಂತಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!