ಚಂಪಾ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ: ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ

ಬೆಂಗಳೂರು: ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾದ ವಿಷಯದಿಂದ ತುಂಭಾ ದುಃಖಿತನಾಗಿದ್ದೇನೆ.

ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. 

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!