ರಾಗಿ ಖರೀದಿ ಮಿತಿ ಸೂಕ್ತ ತೀರ್ಮಾನದ ಭರವಸೆ: ರೈತಸಂಘದ ಪ್ರತಿಭಟನಾ ಧರಣಿಗೆ ತಾತ್ಕಾಲಿಕ ವಿರಾಮ

ದೊಡ್ಡಬಳ್ಳಾಪುರ: ರಾಗಿ ಖರೀದಿಗೆ ಇರುವ ಗರಿಷ್ಟ ಎಕರೆಗೆ 20 ಕ್ವಿಂಟಾಲ್ ಮಿತಿಯನ್ನು ತೆಗೆದುಹಾಕುವ ಕುರಿತು ಜ.15ರ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಉಮೇಶ್ ಕತ್ತಿ ರೈತ ಮುಖಂಡರಿಗೆ ಭರವಸೆ ನೀಡಿರುವ ಹಿನ್ನಲೆಯಲ್ಲಿ ನಗರದ ಎಪಿಎಂಸಿ ಆವರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿಗೆ ಇರುವ ಮಿತಿಯನ್ನು ತೆಗೆದುಹಾಕುವಂತೆ  ಒತ್ತಾಯಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನಡೆಸುತ್ತಿದ್ದ ಪ್ರತಿಭಟನೆಗೆ ತಾತ್ಕಾಲಿಕ ವಿರಾಮ ಬಿದ್ದಿದೆ.

ಕೇಂದ್ರದ ಆವರಣದಲ್ಲಿ ಈ ಕುರಿತು ಸುದ್ಧಿಗೋಷ್ಟಿಯಲ್ಲಿ ಮಾಹಿತಿ ನೀಡಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು, ಬೆಂಬಲ ಬೆಲೆ ಯೋಜನೆಯಲ್ಲಿ ರಾಗಿ ಖರೀದಿಗೆ ಇರುವ ಗರಿಷ್ಟ ಎಕರೆಗೆ 20 ಕ್ವಿಂಟಾಲ್ ಮಿತಿಯನ್ನು ತೆಗೆದುಹಾಕುವ ಕುರಿತು 10 ದಿನಗಳಿಂದ ರಾಗಿ ಖರೀದಿ ಕೇಂದ್ರದ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ಬಗ್ಗೆ ಜಿಲ್ಲಾಕಾರಿಗಳಿಗೂ ದೂರು ನೀಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಇಡೀ ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವ ಕೃಷಿ ಉತ್ಪನ್ನಗಳ ಖರೀದಿ ಮಿತಿ  ತೆಗೆದು ಹಾಕುವ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜ.10ರಂದು ರಾಜ್ಯ ರೈತ ಮುಖಂಡರ ನಿಯೋಗದೊಂದಿಗೆ ತೆರಳಲಾಗಿತ್ತು. ಸಾಹಿತಿ ಚಂಪಾ ಅವರ ನಿಧನದಿಂದಾಗಿ ಹಾಗೂ ಮುಖ್ಯಮಂತ್ರಿಗಳ ತುರ್ತು ಕಾರ್ಯ ನಿಮಿತ್ತ ಭೇಟಿ ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಉಮೇಶ್ ಕತ್ತಿ ಅವರಿಗೆ ಮನವಿ ಸಲ್ಲಿಸಿ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಸಚಿವರು ಜ.15ರ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಆಶ್ವಾಸನೆ ನೀಡಿದ್ದಾರೆ.  ಆದ್ದರಿಂದ ತಾತ್ಕಾಲಿಕವಾಗಿ ಧರಣಿ ಹಿಂತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜ.20ರೊಳಗೆ ಯಾವುದೇ ತೀರ್ಮಾನ ಕೈಗೊಳ್ಳದಿದ್ದಲ್ಲಿ ರಾಗಿ ಬೆಳೆಯುವ ಜಿಲ್ಲೆಗಳ ರೈತರಿಗೆ ಮೂಟೆಗಳನ್ನು ಹೊತ್ತು ವಿಧಾನ ಸೌಧ ಚಲೋ ಚಳವಳಿ ನಡೆಸಬೇಕಾಗುತ್ತದೆ ಎಂದರು.

ಕೇಂದ್ರ ಸರ್ಕಾರ 14 ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದೆ. ರೈತರಿಗೆ ಕನಿಷ್ಟ ಬೆಂಬಲ ಬೆಲೆ ಎಂದು ನಿಗದಿಪಡಿಸುವುದೇ ಅವೈಜ್ಞಾನಿಕ. ಬೆಂಬಲ ಬೆಲೆಯಲ್ಲಿ ಇಲ್ಲಸಲ್ಲದ ಮಾನದಂಡ ನಿಗದಿ ಪಡಿಸಿ ರೈತರ ಶೋಷಣೆ ಮಾಡುವುದು ಸರ್ಕಾರಗಳಿಗೆ ಶೋಭೆಯಲ್ಲ. ರೈತರಿಗೆ ಸ್ವಾಮಿನಾಥನ್ ವರದಿಯಂತೆ ಬೆಲೆ ನಿಗದಿ ಮಾಡಬೇಕಿದೆ. ಆವರ್ತ ನಿಧಿ ಸ್ಥಾಪಿಸಿ, ಬೆಲೆಗಳು ಕನಿಷ್ಟವಾಗದಂತೆ ಸರ್ಕಾರ ಕ್ರಮವಹಿಸಬೇಕಿದೆ. ಪ್ರೂಟ್ ತಂತ್ರಾಂಶದಲ್ಲಿ ತಿದ್ದುಪಡಿಯಾಗುವುದಿಲ್ಲ. ಇದರಲ್ಲಿಯೂ ತಾಂತ್ರಿಕ ದೋಷಗಳಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು ಪ್ರತಿ ಹೋಬಳಿಯಲ್ಲಿಯೂ ರಾಗಿ ಖರೀದಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.

ಈ ವೇಳೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!