ಯುವಜನತೆ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ‌ ಉತ್ತಮ ಜೀವನ ರೂಪಿಸಿಕೊಳ್ಳಿಬೇಕು: ಸಚಿವ ಎನ್.ನಾಗರಾಜು(ಎಂ.ಟಿ.ಬಿ)

ಬೆಂ.ಗ್ರಾಜಿಲ್ಲೆ: ಏಳಿ ಏದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಸಂದೇಶದನ್ವಯ ಯುವಜನತೆ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ‌ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜ್ (ಎಂ.ಟಿ.ಬಿ) ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿಂದು ಏರ್ಪಡಿಸಲಾಗಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಜಿಲ್ಲಾ ಮಟ್ಟದ ಯುವಜನ ಮೇಳ ಸ್ಪರ್ಧೆ:2021-22ರ ಉದ್ಘಾಟನಾ ಸಮಾರಂಭದಲ್ಲಿ ಸ್ವಾಮಿ ವಿವೇಕಾನಂದ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರು ಮಾತನಾಡಿದರು.  

ಯುವಜನತೆ ತಮ್ಮ ಸಾವಿನ ನಂತರವು ಸಮಾಜ ಸ್ಮರಿಸುವಂತಹ ಗುರುತರವಾದ ಕಾರ್ಯ ಕಲಾಪಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರಲ್ಲದೆ, ಯುವಜನತೆ ಸಮಯಪಾಲನೆ, ನಿಷ್ಠೆಯೊಂದಿಗೆ ಭವಿಷ್ಯ ರೂಪಿಸಿಕೊಳ್ಳಲು ಹೆಚ್ಚು ಆಸಕ್ತಿ ವಹಿಸಬೇಕು ಎಂದು ಹೇಳಿದರು.

ಸ್ವಾಮಿ ವಿವೇಕಾನಂದರು ಯುವಜನತೆಗೆ ಪ್ರೇರೇಪಣೆ ತುಂಬಿದ ಮಹಾನ್ ವ್ಯಕ್ತಿಗಳಾಗಿದ್ದು, ಸದೃಢ ಭಾರತ ಕಟ್ಟುವಲ್ಲಿ ಯುವಜನತೆಯ ಪಾತ್ರ ಅಪಾರವಾಗಿದೆ ಎಂದರು.

ಹೇಡಿಯಾಗಿ ನೂರು ವರ್ಷ ಬದುಕುವುದಕ್ಕಿಂತ ಶೂರರಾಗಿ ಒಂದು ದಿನ ಬದುಕಿದರೆ ಸಾಕು ಎಂಬ ವಿವೇಕಾನಂದರ ನುಡಿಯಂತೆ ಯುವಜನತೆ ಸಕಾರಾತ್ಮಕ ಅಂಶಗಳೊಂದಿಗೆ ಧೀರತನದಲ್ಲಿ ಜೀವನ ನಡೆಸಬೇಕು ಎಂದರಲ್ಲದೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ಶಿಸ್ತು, ಸಮಯಪ್ರಜ್ಞೆಯ ಮೂಲಕ ಯಶಸ್ಸು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ 1995ರಲ್ಲಿ ಕೇಂದ್ರ ಸರ್ಕಾರ ಯುವಜನೋತ್ಸವ ಕಾರ್ಯಕ್ರಮ ನಡೆಸಲು ಘೋಷಿಸಿತಲ್ಲದೆ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಯುವಜನೋತ್ಸವ ಕಾರ್ಯಕ್ರಮ ನಡೆಯುತ್ತದೆ ಎಂದು ತಿಳಿಸಿದರು.

ವಿವೇಕಾನಂದರು ಯುವಶಕ್ತಿಯ ಬೆಳವಣಿಗೆಗೆ ಸ್ಫೂರ್ತಿಯಾಗಿದ್ದು, ಯುವಜನತೆ ಧೈರ್ಯ, ಸ್ಥೈರ್ಯದಿಂದ ಬದುಕುವ ಹಾಗೂ ಏಕಾಗ್ರತೆಯ ಚಿತ್ತದಿಂದ ಸಾಧನೆ ಗೈಯುವ ಮನಸ್ಥಿತಿಯನ್ನು  ಹೊಂದಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರದ ಯೋಗಾಕೇಂದ್ರದ ವಿದ್ಯಾರ್ಥಿಗಳು ಯೋಗಾಸನದ ವಿವಿಧ ಆಸನಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಬಿ.ಎನ್.ಕೃಷ್ಣಪ್ಪ ಅವರು ಸ್ವಾಮಿ ವಿವೇಕಾನಂದರ ಕುರಿತು ಹಾಗೂ ರಾಷ್ಟ್ರೀಯ ಯುವ ದಿನದ ಕುರಿತು ಉಪನ್ಯಾಸ ನೀಡಿದರು.

ದೇವನಹಳ್ಳಿ ತಾಲ್ಲೂಕಿನ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೌರಮ್ಮ ರಾಮಣ್ಣ, ಉಪಾಧ್ಯಕ್ಷರಾದ ಶ್ರೀಕಾಂತ ಮುನಿರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯ. ಈ.ರವಿಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ವಿವಿಧ ಯುವಕ ಸಂಘ ಸಂಸ್ಥೆಯ ಮುಖ್ಯಸ್ಥರು, ಯುವ ಕಲಾವಿದರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!