ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಅವರು, “ನಾನು ಅವರ ಜಯಂತಿಯಂದು ಮಹಾನ್ ಸ್ವಾಮಿ ವಿವೇಕಾನಂದರಿಗೆ ನಮನಗಳನ್ನು ಸಲ್ಲಿಸುತ್ತೇನೆ. ಅವರ ಜೀವನವು ರಾಷ್ಟ್ರದ ಪುನರುತ್ಥಾನಕ್ಕಾಗಿ ಮುಡಿಪಾಗಿದೆ. ಅವರು ಅನೇಕ ಯುವಕರನ್ನು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು ಪ್ರೇರೇಪಿಸಿದ್ದಾರೆ. ಅವರು ನಮ್ಮ ರಾಷ್ಟ್ರಕ್ಕಾಗಿ ಅವರು ಕಂಡ ಕನಸುಗಳನ್ನು ನನಸಾಗಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ.” ಎಂದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಟ್ವಿಟ್ ಮಾಡಿ. “ಯುವಶಕ್ತಿಯ ಆದರ್ಶ ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು ಹಾಗೂ ನಾಡಿನ ಸಮಸ್ತ ಜನತೆಗೆ ರಾಷ್ಟ್ರೀಯ ಯುವ ದಿನದ ಶುಭಕಾಮನೆಗಳು.
ಸ್ವಾಮಿ ವಿವೇಕಾನಂದರು ತೋರಿದ ದಾರಿಯಲ್ಲಿ ಮುನ್ನಡೆದು ನವಭಾರತ ನಿರ್ಮಾಣದ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ ಎಂದು ನಮನ ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….