ನೀರಿನ ನೆಪದ ದೊಂಬರಾಟಕ್ಕೆ ಕೊನೆ ಹಾಡಬೇಕು: ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೋವಿಡ್ ರಕ್ಕಸ ರೂಪ ಪಡೆದು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರೇ  ಪಾಸಿಟವ್ ಆಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಸರಿಯಾಗಿ ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಬಯಲಾಗುತ್ತದೆ.

ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ. ಮತ್ತೊಮ್ಮೆ ಸರಕಾರ ಮುಜುಗರಕ್ಕೆ ಒಳಗಾಗುವುದು ಸರಿಯಲ್ಲ.

ಕಳೆದ 4  ದಿನಗಳಿಂದ ಜಿಲ್ಲೆಗಳಿಂದ ಬಸ್ಸುಗಳಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು ʼಸೋಂಕಿನ ಸಮಾರಾಧನೆʼಯಷ್ಟೇ ಹೊರತು ಹೋರಾಟವಲ್ಲ. ಸರಕಾರ ಜಿಲ್ಲೆಗಳಿಂದ ಬರುವ ಜನರನ್ನು ಅಲ್ಲಲ್ಲಿಯೇ ತಡೆಯುವ ಕೆಲಸ ಮಾಡಬೇಕು.

ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ.

1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ನಾನು ವಿವರವಾಗಿ ಚರ್ಚೆ ಮಾಡುತ್ತೇನೆ.

ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ  ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ.

ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಯಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ ʼಹೈಟೆಕ್ ಪಾದಯಾತ್ರೆʼಯನ್ನು ನೋಡಿರಲಿಲ್ಲ. ಇಂಥ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ.

ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ.

ಕಳೆದ 4 ದಿನಗಳಿಂದ ಸರಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ.ಸರಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]