ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕರ್ನಾಟಕಕ್ಕೆ ರೂ 642.26 ಕೋಟಿ ಮಂಜೂರು

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಕೃಷಿ ಇಲಾಖೆ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ರೂ 642.26 ಕೋಟಿ ಮಂಜೂರಾಗಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.

ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಈ ಯೋಜನೆಯಡಿ ಕೇಂದ್ರದಿಂದ ಶೇ.60 ರಾಜ್ಯದಿಂದ ಶೇ.40 ರ ಅನುಪಾತದಲ್ಲಿ ಯೋಜನೆಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್ ಜಲಾನಯನಗಳ ಉಪಚಾರಕ್ಕೆ 22 ಸಾವಿರ ರೂ. ಗುಡ್ಡಗಾಡು ಪ್ರದೇಶದ ಉಪಚಾರಕ್ಕೆ 28 ಸಾವಿರ ರೂ.ವರೆಗೆ ಅನುದಾನ  ಲಭ್ಯವಾಗಲಿದೆ .ಈ ಯೋಜನೆಯನ್ನು ರಾಜ್ಯದ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವನ್ನು ಉಪಚರಿಸಲು ಅನುಮೋದನೆ ನೀಡಲಾಗಿದೆ ಎಂದರು.

ಯೋಜನೆಯ ಮುಖ್ಯ ಉದ್ದೇಶಗಳನ್ನು ವಿವರಿಸಿದ ಸಚಿವರು,ಮಳೆ ನೀರು ಕೊಯ್ಲ ಮೂಲಕ ಮಣ್ಣಿನ ತೇವಾಂಶ ಸಂರಕ್ಷಿಸುವುದು.ಪರ್ಯಾಯ ಬೆಳೆ ವ್ಯವಸ್ಥೆಗಳು,ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯಗಳನ್ನು ಎದುರಿಸುವುದು,ಅಂತರ್ಜಲ ಹೆಚ್ಚಿಸಲು ಅನುಕೂಲವಾಗುತ್ತದೆ.  ಆಸ್ತಿರಹಿತರಿಗೆ ಸ್ವಸಹಾಯ ಗುಂಪುಗಳನ್ನು ರಚಿಸಿ (SHGs) ಉತ್ತೇಜಿಸುವುದು ವಿಕಲಚೇತನರು ಮತ್ತು ಮಹಿಳೆಯರಿಗೆ ಅಭಿವೃದ್ಧಿಪಡಿಸಿದ ಭೂಮಿ, ನೀರು ಮತ್ತು ಜೀವರಾಶಿ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ ಹಾಗೂ ಎಫ್.ಪಿ.ಒ ಬಳಕೆದಾರರ ಗುಂಪುಗಳು ಮುಂತಾದ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವುದಾಗಿದೆ ಎಂದರು.

ಜಲಾನಯನ ಅಭಿವೃದ್ಧಿ ಇಲಾಖೆಯ ಸಾಧನೆಗಳನ್ನು ಮುಂದುವರೆಸಿ ಮಾತನಾಡಿದ ಬಿ.ಸಿ.ಪಾಟೀಲ್, 2021-22 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ ಸುಜಲ-iii ಯೋಜನೆ ಮಾದರಿಯಲ್ಲಿ ವಿಶ್ವಬ್ಯಾಂಕ್ ಅನುದಾನದ ನೆರವಿನಲ್ಲಿ ಹೊಸ ರಿವಾರ್ಡ್ ( ಕೃಷಿಯ ಸುಸ್ಥಿರತೆಗಾಗಿ ನವೀನ ಅಭಿವೃದ್ಧಿಯ ಮೂಲಕ ಜಲಾನಯನ ಪ್ರದೇಶಗಳನ್ನು ಪುನಶ್ಚೇತನಗೊಳಿಸುವ ಯೋಜನೆ ಜಾರಿಗೊಳಿಸಿ ರಾಜ್ಯದ 21 ಜಿಲ್ಲೆಗಳಲ್ಲಿ 600 ಕೋಟಿ ರೂ.ವೆಚ್ಚದಲ್ಲಿ ವಿಶ್ವಬ್ಯಾಂಕಿನ ಶೇ.70 ರಾಜ್ಯದ ಶೇ.30 ಪಾಲಿನಂತೆ ಯೋಜನೆಯನ್ನು ಮುಂದಿನ 5  ವರ್ಷಗಳ ಕಾಲ ಅನುಷ್ಠಾನಗೊಳಿಸಲಾಗಿದೆ ಎಂದರು.

ದೇಶದಲ್ಲಿಯೇ ಕರ್ನಾಟಕ ಕೃಷಿ ಇಲಾಖೆಯ ಜಲಾನಯನ ಇಲಾಖೆಯು ಇತರೆ ರಾಜ್ಯಗಳಿಗೆ ತಾಂತ್ರಿಕ ಸಲಹೆ ನೀಡಲು ಮಾದರಿಯಾಗಿದ್ದು, ಕರ್ನಾಟಕ ರಾಜ್ಯವನ್ನು ಕೇಂದ್ರ ಸರ್ಕಾರ “ಲೈಟ್ ಹೌಸ್” ಎಂದು ಗುರುತಿಸಿರುವುದು ಕರ್ನಾಟಕದ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!