ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಕಾರ್ಯಕಾರಿ ಸಮಿತಿ ನಿರ್ದೇಶಕರಾಗಿ ಆಯ್ಕೆಯಾದ ಜೆ.ರಾಜೇಂದ್ರ ಅವರನ್ನು, ಶ್ರೀ ದೇವರಾಜ್ ಅರಸ್ ಪದವಿಪೂರ್ವ ಕಾಲೇಜಿನ ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.
ಇಂದು (ಜ.13) ಆರ್.ಎಲ್.ಜಾಲಪ್ಪ ಕಾಲೇಜು ಆವರಣದಲ್ಲಿನ ಅತಿಥಿ ಗೃಹದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಹಾಂತೇಶ್, ಸೂಪರ್ಡೆಂಟ್ ಮಂಜುನಾಥ್, ಅಕೌಂಟೆಂಟ್ ವೀರಭದ್ರಾಚಾರಿ, ಉಪನ್ಯಾಸಕರಾದ ದಾದಾಪೀರ್, ವೆಂಕಟಾಚಲ, ಶಂಕರಪ್ಪ, ಯೋಗೇಶ್ ಅವರು ರಾಜೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದರು.
ಜ.9ರಂದು ಬೆಂಗಳೂರಿನ ಈಡಿಗರ ಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆ.ರಾಜೇಂದ್ರ ಅವರು 145 ಮತಗಳ ಅಂತರದಿಂದ ವಿಜೇತರಾಗಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….