ದೊಡ್ಡಬಳ್ಳಾಪುರ: ನಗರಸಭೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಬಿಟ್ಟು, ಚುನಾವಣೆ ನಡೆದು ಮೂರು ವರ್ಷಗಳ ನಂತರ ಇಂದು ನಡೆದ ಮೊದಲ ಸರ್ವ ಸದಸ್ಯರ ಸಭೆಗೆ ಪ್ರತಿಭಟನೆ ಬಿಸಿ ತಟ್ಟಿತ್ತು.
ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಸಭೆಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರು ಹಾಗೂ ಮುಖಂಡರು ಸಭೆಯನ್ನು ಬಹಿಷ್ಕಾರಿಸಿ ನಗರಸಭೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದ ಸದಸ್ಯರು ಶಿಷ್ಟಾಚಾರ ಉಲ್ಲಂಘನೆಯನ್ನು ಖಂಡಿಸಿದರು.
ಪ್ರತಿಭಟನೆಯಿಂದ ಸಭೆ ಆರಂಭವಾಗದೆ ಉಳಿಯಿತು. ಕೂಡಲೇ ಹೆಚ್ಚೆತ್ತ ಅಧಿಕಾರಿಗಳು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯುತ್ತಿದ್ದ ಕೋವಿಡ್ ಸಭೆಯಲ್ಲಿದ್ದ ಶಾಸಕರ ಬಳಿ ದೌಡಾಯಿಸಿ ಸಭೆಗೆ ಬರುವಂತೆ ಮನವಿ ಮಾಡಿದರು.
ನಂತರ ನಗರಸಭೆ ಆವರಣಕ್ಕೆ ಬಂದ ಶಾಸಕ ಟಿ.ವೆಂಕಟರಮಣಯ್ಯ ಸಹ ಪ್ರತಿಭಟನಾ ನಿರತರೊಂದಿಗೆ ಪ್ರತಿಭಟನೆಗೆ ಕುಳಿತರು. ಈ ವೇಳೆ ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಅಧಿಕಾರಿಗಳಿಂದ ಆದ ತೊಂದರೆಗೆ ಕ್ಷಮೆಯಾಚಿಸಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.
ನಂತರ ಪ್ರತಿಭಟನೆ ಕೈಬಿಟ್ಟ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.
ಪ್ರಸ್ತುತ ಸಭೆ ನಡೆಯುತ್ತಿದ್ದು ವರದಿ ನೀಡಲಾಗುವುದು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….