ದೊಡ್ಡಬಳ್ಳಾಪುರ: ಎರಡು ದಿನಗಳಿಂದಷ್ಟೆ ತಾಲೂಕಿನ 38 ಮಕ್ಕಳಿಗೆ ದೃಢಪಡುವ ಮೂಲಕ ಆತಂಕ ಸೃಷ್ಟಿಸಿದ್ದ ಕೋವಿಡ್ ಸೋಂಕು, ಗುರುವಾರ ಮತ್ತೆ 25 ಮಕ್ಕಳಿಗೆ ಹರಡಿದೆ.
ನಗರದ ದೇವಲಮಹರ್ಷಿ ಖಾಸಗಿ ಶಾಲೆಯ 25 ಮಕ್ಕಳಿಗೆ ಸೋಂಕು ದೃಢಪಟ್ಟಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಹರಿತಲೇಖನಿಗೆ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು ಮಕ್ಕಳಿಗೆ ಸೋಂಕು ದೃಢಪಟ್ಟಿದ್ದರು ಪೋಷಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕಾರಣ ಸೋಂಕು ದೃಢಪಟ್ಟಿರುವ ಮಕ್ಕಳಿಗೆ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಶಾಲೆಯನ್ನು ಸ್ಯಾನಿಟೈಸ್ ಮಾಡಿಸಿ, ತಾತ್ಕಾಲಿಕ ರಜೆ ನೀಡಲಾಗಿದೆ.
ಉಳಿದಂತೆ ತಾಲೂಕಿನ ಎಲ್ಲಾ ಶಾಲೆಗಳಲ್ಲಿನ ಮಕ್ಕಳಿಗೆ ಸೋಂಕು ತಪಾಸಣೆ ನಡೆಸಲಾಗುತ್ತಿದ್ದು, ಕೋವಿಡ್ ನಿಗ್ರಹಕ್ಕೆ ತಾಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಶ್ರಮಿಸಲಾಗುತ್ತಿದೆ. ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸುವಂತೆ ಮನವಿ ಮಾಡಿದ್ದಾರೆ.
ಸಿಡಿಪಿಒ ಕಚೇರಿ ಸೀಲ್ ಡೌನ್: ನಗರದ ಎಪಿಎಂಸಿ ಮಾರುಕಟ್ಟೆ ಕಚೇರಿ ಬಳಿಯಿರುವ ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢಪಟ್ಟಿದ್ದು, ಇಂದು ಕಚೇರಿಗೆ ಸ್ಯಾನಿಟೈಸ್ ಮಾಡಿಸಲಾಗುತ್ತಿದೆ ಎಂದು ಸಿಡಿಪಿಒ ಅನಿತಾಲಕ್ಷ್ಮೀ ತಿಳಿಸಿದ್ದಾರೆ.
(ಆತಂಕ ಬೇಡಾ, ಮುಂಜಾಗ್ರತೆ ಇರಲಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….