ಬೆಂ.ಗ್ರಾ.ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕ ರೋಗದ ಹೊಸ ರೂಪಾಂತರ ಒಮೀಕ್ರಾನ್ ಹಾವಳಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 2022ರ ಜನವರಿ 14ರ ಮಧ್ಯರಾತ್ರಿ 12.00 ಗಂಟೆಯಿಂದ ವಿವಿಧ ನಿಬಂಧನೆಗಳ ಮೇರೆಗೆ ನಿಷೇಧಾಜ್ಞೆಯನ್ನು ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಮಕರ ಸಂಕ್ರಾಂತಿ ಹಬ್ಬದ ಆಚರಣೆಗಳನ್ನು ನಿಷೇಧಿಸಲಾಗಿದೆ ಹಾಗೂ ಮುಂಬರುವ ಯಾವುದೇ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶ, ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಿಷೇಧಿಸಲಾಗಿದೆ.ಎಲ್ಲಾ ರೀತಿಯ ಸಾಮಾಜಿಕ ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ, ಕಾರ್ಯಕ್ರಮಗಳು ಹಾಗೂ ಗುಂಪು ಸೇರುವುದನ್ನು ನಿಬರ್ಂಧಿಸಿದೆ ಹಾಗೂ ಎಲ್ಲಾ ರೀತಿಯ ಧಾರ್ಮಿಕ ಕಾರ್ಯಗಳನ್ನು ಸಾಂಕೇತಿಕವಾಗಿ ಆಚರಣೆ ಮಾಡಬಹುದಾಗಿದೆ.

ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುವುದು ಕಡ್ಡಾಯವಾಗಿದೆ.

ಯಾವುದೇ ಸಾರ್ವಜನಿಕ ಮೈದಾನ, ರೇಸಾರ್ಟ್, ಹೋಟೆಲ್, ಪಾರ್ಟಿ ಹಾಲ್, ಕಲ್ಯಾಣ ಮಂಟಪ ಮತ್ತು ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು-ಗುಂಪಾಗಿ ಹಬ್ಬಗಳನ್ನು ಆಚರಣೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ಎಲ್ಲಾ ಎಲ್ಲಾ ಕಟ್ಟುನಿಟ್ಟಾದ ನಿರ್ಬಂಧಗಳು ಜನರ ಚಲನ-ವಲನಗಳಿಗೆ ಸಂಬಂಧಿಸಿದವುಗಳಾಗಿದ್ದು, ಅಗತ್ಯ ಸರಕುಗಳಿಗೆ ಸಂಬಂಧಿಸಿರುವುದಿಲ್ಲ.

ಯಾವುದೇ ವ್ಯಕ್ತಿ ಈ ಮೇಲಿನ ಕೋವಿಡ್-19ರ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸಿದಲ್ಲಿ, ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60ರ ಜೊತೆಗೆ, ಭಾರತೀಯ ದಂಡ ಸಂಹಿತೆ ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಆದೇಶಿಸಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!