ದೊಡ್ಡತುಮಕೂರು ಕೆರೆ ಕಲುಷಿತಗೊಳ್ಳಲು ದೊಡ್ಡಬಳ್ಳಾಪುರ ನಗರಸಭೆ ಕಾರಣವಲ್ಲವೆಂದು ಕೈತೋಳೆದುಕೊಂಡ ಅಧ್ಯಕ್ಷೆ ಮತ್ತು ಅಧಿಕಾರಿಗಳು..!

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರಿನ ಕೆರೆಗೆ ನಗರದ ಒಳಚರಂಡಿ ತ್ಯಾಜ್ಯ ನೀರು ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ಸೇರಿ ಕೆರೆನೀರು ಕಲುಷಿತವಾಗಿದ್ದು, ರಾಸಾಯನಿಕಯುಕ್ತ ನೀರು ಕಾರಣವಾಗಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೆರೆ ನೀರು ಕಲುಷಿತವಾಗಲು ದೊಡ್ಡಬಳ್ಳಾಪುರ ನಗರಸಭೆ ಒಳಚರಂಡಿ ನೀರು ಕಾರಣ ಎಂದು ದೊಡ್ಡತುಮಕೂರು ಸುತ್ತಮುತ್ತಲಿನ ಗ್ರಾಮಸ್ಥರು ಹೋರಾಟಕ್ಕೆ ಸಿದ್ದರಾಗುತ್ತಿರುವ ಕುರಿತು, ಗುರುವಾರ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರ ದೌಡಾಯಿಸಿದ ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮಿನಾರಾಯಣ್, ಉಪಾಧ್ಯಕ್ಷೆ ಫರ್ಹಾನತಾಜ್ ಚಿಕ್ಕತುಮಕೂರು ಬಳಿ ಇರುವ ನಗರಸಭೆ ವ್ಯಾಪ್ತಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಶುದ್ದೀಕರಣ ವಿಧಾನದಲ್ಲಿ ಯಾವುದೇ ಲೋಪವಿಲ್ಲವೆಂದು ಕ್ಲೀನ್ ಚೀಟ್ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ನಗರಸಭೆ ಎಇಇ ಶೇಖ್ ಫಿರೋಜ್, ಕಿರಿಯ ಅಭಿಯಂತರ ಚಂದ್ರಶೇಖರ್, ತ್ಯಾಜ್ಯ ನೀರು ಶುದ್ಧೀಕರಿಸುವ ವಿಧಾನವನ್ನು ವಿವರಿಸಿ, ಇಲ್ಲಿನ ಶುದ್ಧಿಕರಣ ಘಟಕದಲ್ಲಿ 6 ಹಂತದಲ್ಲಿ ಯಾವುದೇ ಯಂತ್ರದ ಸಹಾಯ ಇಲ್ಲದೆ ನೈಸರ್ಗಿಕವಾಗಿ ಶುದ್ಧೀಕರಿಸಿ ಕೆರೆಗೆ ಬಿಡಲಾಗುತ್ತಿದೆ. ನಗರದ ಒಳಚರಂಡಿ ನಾವು ವಿಷಯುಕ್ತ ನೀರನ್ನು ಆಚೆ ಬಿಡುತ್ತಿಲ್ಲ. ಕೆರೆ ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ನೀರು ಕಾರಣವಾಗಿರಬಹುದು. ಈ ಹಿಂದೆ ರಸ್ತೆ ಕಾಮಗಾರಿ ನಡೆಯುತ್ತಿದ್ದಾಗ ನೀರಿನ ಪೈಪ್ ಒಡೆದು ಹೋಗಿದ್ದರಿಂದ ಕೆಲಕಾಲ ಶುದ್ದೀಕರಣಕ್ಕೆ ತೊಂದರೆಯಾಗಿತ್ತು. ಈ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದು, ಒಂದು ಪಂಪ್  ಮೋಟಾರ್ ಸಹ ಹೆಚ್ಚುವರಿ ಇದೆ.  ಇಲ್ಲಿನ ಶುದ್ದಿಕರಿಸಿದ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ನಮ್ಮದು ಲೋಪವಿದ್ದರೆ ಸರಿಪಡಿಸಿಕೊಳ್ಳಲಾಗುವುದು ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ನಗರಸಭೆ ತ್ಯಾಜ್ಯ ನೀರು ಶುದ್ಧಿಕರಣ ಘಟಕದಿಂದ ವಿಷಯುಕ್ತ ನೀರು ಕೆರೆಗಳಿಗೆ ಹೋಗುತ್ತಿಲ್ಲ. ಇಲ್ಲಿನ ಕೆರೆಗಳ ನೀರು ವಿಷಯುಕ್ತವಾಗಲು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಿಂದ ಹಾಗು ಕೈಗಾರಿಕೆಗಳು ಶುದ್ದೀಕರಿಸದೆ ನೇರವಾಗಿ ಕೆರೆಗೆ ಬಿಡುತ್ತಿರುವುದೇ ಕಾರಣ ಹೊರತು ನಗರಸಭೆಯದಲ್ಲ ಎಂದು ತಿಳಿಸಿದ್ದಾರೆ.

ನಗರದ ಒಂದುವರೆ ಲಕ್ಷಕ್ಕೂ ಹೆಚ್ಚು ಜನ ಸಂಖ್ಯೆ ಇದ್ದು, ಅಲ್ಲಿನ ಒಳಚರಂಡಿ ವ್ಯವಸ್ಥೆ ಮೂಲಕ ಅವೈಜ್ಞಾನಿಕವಾಗಿ ಶುದ್ಧಿಕರಿಸಿ ಚಿಕ್ಕತುಮಕೂರು ಕರೆ ತುಂಬಿ ಕೋಡಿ ಹೋಗುವ ಮೂಲಕ ದೊಡ್ಡತುಮಕೂರು ಕೆರೆ ಸೇರುತ್ತಿದೆ. ಇದರೊಂದಿಗೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ವಿಷಯುಕ್ತ ನೀರು ಸಹ ಸೇರುತ್ತಿದೆ.

ಶುದ್ಧವಾದ ನೀರನ್ನು ಉಳಿಸಿ: 20 ವರ್ಷಗಳ ನಂತರ ಕೆರೆ ತುಂಬಿರುವ ಖುಷಿ ನಮಗೆ ಜೀವಂತವಾಗಿಲ್ಲ. ಇಲ್ಲಿನ ನೀರನ್ನು ಜನ ಜಾನುವಾರುಗಳ ಬಳಸದ ಹಾಗೆ ಹಾಗಿದೆ. ಅಂತರರ್ಜಲವೂ ವಿಷಯುಕ್ತವಾಗುತ್ತಿದೆ. ಹೀಗಾಗಿ ನಮಗೆ ನಗರಸಭೆಯ ಈ ವಿಧಾನದಿಂದ ಶುದ್ಧಿಕರಿಸಿದ ನೀರು ನಮಗೆ ಬೇಡ, ಬಾಶೆಟ್ಟಿಹಳ್ಳಿ ವಿಷಯುಕ್ತ ನೀರು ಸಹ ಬೇಡ. ನಮಗೆ ಶುದ್ಧವಾದ ನೀರನ್ನು ಉಳಿಸಿ. ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದು ದೊಡ್ಡತುಮಕೂರು ಗ್ರಾಮಸ್ಥರಾದ ಟಿ..ಆನಂದ್‍ಕುಮಾರ್, ಟಿ.ಜಿ.ಮಂಜುನಾಥ್, ಎಸ್.ಎಸ್.ಟಿ ಮಂಜುನಾಥ್, ನಾಗರಾಜುಬಾಬು, ಸಿ.ರಾಮಕೃಷ್ಣ ಮತ್ತಿತರರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ

ಬಾಶೆಟ್ಟಿಹಳ್ಳಿ ಬಳಿ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಅಪರಿಚಿತ ಮೃತ ದೇಹ (Unknown body) ಪತ್ತೆ ಪ್ರಕರಣದ ಕುರಿತಂತೆ, ಮೃತನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="110603"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!