ದೊಡ್ಡಬಳ್ಳಾಪುರ: ಈ ಬಾರಿಯೂ ಹಬ್ಬಗಳಿಗೆ ಕರೊನಾ ಬಿಸಿ ತಟ್ಟುತ್ತಿದೆ. ಈ ನಡುವೆ ಸಂಕ್ರಾಂತಿ ಹಬ್ಬ ಆಗಮಿಸಿದ್ದು, ಎಲ್ಲೆಡೆ ಹಬ್ಬದ ಆಚರಣೆ ಸಡಗರದಿಂದ ನಡೆಯುತ್ತಿವೆ.
ದಿನೇ ದಿನೇ ಕೃಷಿಯಿಂದ ವಿಮುಖವಾಗುತ್ತಿರುವ ಇಂದಿನ ದಿನಗಳಲ್ಲಿ ಹಿಂದಿನ ಸಂಭ್ರಮಾಚರಣೆ ಇಲ್ಲದಿದ್ದರೂ, ಅಗತ್ಯ ಧಾನ್ಯಗಳ, ಹೂ ಹಣ್ಣುಗಳ ಗಗನಕ್ಕೇರಿರುವ ಬೆಲೆಗಳ ನಡುವೆ ಸಂಕ್ರಾಂತಿ ಹಬ್ಬವನ್ನು ನಡೆಯುತ್ತಿದೆ.
ಕೆ.ಜಿ ಕಡಲೇಕಾಯಿ 80ರೂ, ಎಳ್ಳು ಬೆಲ್ಲ ಕೆಜಿಗೆ 200 ರೂ. ಗೆಣಸು 40ರೂ. ಕಬ್ಬು ಜಳವೆಗೆ 60 ರೂ. ಅವರೇಕಾಯಿ ಕೆ.ಜಿಗೆ 70ರೂ ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ.
ಬೆಲೆ ಏರಿಕೆಯ ನಡುವೆಯೇ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಕಬ್ಬು, ಗೆಣಸು, ಕಡಲೇಕಾಯಿಗಳ ಮಾರಾಟ ಭರದಿಂದ ಸಾಗಿತ್ತು.
ಸಂಕ್ರಾಂತಿ ಹಬ್ಬಕ್ಕೆ ಅಗತ್ಯವೆನಿಸಿದ ಅಕ್ಕಿ, ಬೇಳೆ, ಧಾನ್ಯಗಳ ಬೆಲೆಯೊಂದಿಗೆ ಹೂವು ಹಣ್ಣಿನ ಬೆಲೆಗಳು ಸಹ ಗಗನಕ್ಕೇರಿವೆ.
ಕಾಕಡ ಕೆ.ಜಿಗೆ 500ರೂ ಕನಕಾಂಬರ ಕೆ.ಜಿಗೆ 1000ರೂ ಇದ್ದರೆ ಶಾಮಂತಿಗೆ, ಗುಲಾಬಿ ಮೊದಲಾದ ಹೂವಿನ ಬೆಲೆಗಳು 200 ರೂ ರವರೆಗೂ ಇವೆ. ತರಕಾರಿಗಳ ಬೆಲೆಗಳು ಸಹ ಹೆಚ್ಚಾಗಿವೆ.
ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಬ್ಬು ಬೆಳೆಯುವುದೇ ಕಡಿಮೆಯಾಗಿದ್ದು, ಕಬ್ಬನ್ನು ಹೊರಗಿನಿಂದ ತಂದು ಮಾರಾಟ ಮಾಡಲಾಗುತ್ತಿದೆ.
ಬೆಲೆ ಏರಿಕೆಯ ಬಡುವೆಯೂ ಎಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದು,ಹಬ್ಬದ ದಿನವೂ ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ನಡೆದಯುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….