ಗೋಪೂಜೆ ಮೂಲಕ ಸಡಗರದ ಮಕರ ಸಂಕ್ರಾಂತಿ ಆಚರಿಸಿದ ದೊಡ್ಡಬಳ್ಳಾಪುರದ ಬೆಸ್ಕಾಂ ಎಇಇ ಇನಾಯತ್ ಉಲ್ಲಾಖಾನ್ / ಎಲೆಮರೆ ಕಾಯಿಯಂತೆ ಗೋಶಾಲೆ ನಡೆಸುತ್ತಿರುವ ಮುಸ್ಲಿಂ ಕುಟುಂಬ / ದೇಸಿ ತಳಿ ಹಸುಗಳ ಸಂಗಮ ಕ್ಯುಪಿಡ್ ಗೋಶಾಲೆ

ದೊಡ್ಡಬಳ್ಳಾಪುರ: 2022ನೇ ಸಾಲಿನ ಮೊದಲನೆಯ ಹಬ್ಬ ಮಕರ ಸಂಕ್ರಾಂತಿ ಬಂದಿದೆ. ಇಂದು ದೇಶಾದ್ಯಂತ ಸಂಕ್ರಾಂತಿ ಹಬ್ಬವನ್ನು ವಿವಿಧ ಹೆಸರು, ಧಾರ್ಮಿಕ ವಿಧಿ-ವಿಧಾನ, ಆಚರಣೆಗಳಿಂದ ಆಚರಿಸಲಾಗುತ್ತದೆ.

ಅಂತೆಯೇ ದೊಡ್ಡಬಳ್ಳಾಪುರಕ್ಕೆ ಹೊಂದಿಕೊಂಡಿರುವ ಗೌರಿಬಿದನೂರು ತಾಲೂಕಿನ ಗೊಡ್ಡಾವಲಹಳ್ಳಿ ಬಳಿ ಸ್ಥಾಪಿಸಿರುವ ಗೋಶಾಲೆಯಲ್ಲಿ ದೊಡ್ಡಬಳ್ಳಾಪುರ ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್ ಕುಟುಂಬದೊಂದಿಗೆ ಗೋಪೂಜೆ ನಡೆಸುವ ಮೂಲಕ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಿದರು.

ಕ್ಯುಪಿಡ್ ಗೋಶಾಲೆ: ದೊಡ್ಡಬಳ್ಳಾಪುರ ಬೆಸ್ಕಾಂ ಎಇಇ ಇನಾಯತ್ ಉಲ್ಲಾಖಾನ್ ಹಾಗೂ ಪತ್ನಿ ಸುಷ್ಮಾಇನಾಯತ್ ಉಲ್ಲಾಖಾನ್ ಅವರು ಮೂಲತಃ ಮುಸ್ಲಿಂ ಸಮುದಾಯದವರಾದರು ಗೋಪ್ರಿಯರು. ಈ ಕಾರಣದಿಂದಲೇ 2014 ರಲ್ಲಿ ಕ್ಯುಪಿಡ್ ಟ್ರಸ್ಟ್ ಗೋಶಾಲೆ ಆರಂಭಿಸಿ ದೇಸಿ ತಳಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕಂಡುಬರುವ ಸುಮಾರು 6 ತಳಿಯ 30 ರಾಸುಗಳನ್ನು ಸಂರಕ್ಷಿಸುತ್ತಿದ್ದಾರೆ.

ಆಂದ್ರಪ್ರದೇಶದ ಪುಂಗನೂರ್ ಗಿಡ್ಡ ಹೋರಿ, ಕೇರಳದ ವೆಚೂರ್, ಉತ್ತರ ಕರ್ನಾಟಕದ ದೇವನಿ, ಸ್ವರ್ಣಕಪಿಲ, ತಾಮ್ರಬಣ್ಣದ ಕಪಿಲ ಹಾಗೂ ಹಳ್ಳಿಕಾರ್ ತಳಿಗಳು ಕ್ಯುಪಿಡ್ ಗೋಶಾಲೆಯಲ್ಲಿ ಗಮನ ಸೆಳೆಯುತ್ತವೆ.

ಮಕರ ಸಂಕ್ರಾತಿ ಇಂದು ಗೋಶಾಲೆಯಲ್ಲಿ ಹಬ್ಬದ ವಾತಾವರಣ ಕಂಡುಬಂದಿದ್ದು, ಗೋವುಗಳಿಗೆ ಪೂಜೆ ಸಲ್ಲಿಸಿ, ಪ್ರಿಯವಾದ ಬಾಳೆಹಣ್ಣು, ಗೆಣಸು, ಅವರೆಕಾಯಿ, ಕಬ್ಬುಗಳನ್ನು ಆಹಾರವಾಗಿ ನೀಡಲಾಯಿತು.

ದೇಸಿ ತಳಿ ಗೋವುಗಳ ರಕ್ಷಣೆಗೆ ಪಣತೊಟ್ಟಂತೆ ಶ್ರಮಿಸುತ್ತಿರುವ ಇನಾಯತ್ ಉಲ್ಲಾಖಾನ್ ದಂಪತಿಗಳು ಗೋ ಪೂಜೆ ಮೂಲಕ ಮಕರ ಸಂಕ್ರಾತಿಯನ್ನು ಆಚರಿಸಿ ಗೋಪ್ರೇಮ ಮೆರೆಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮತದಾರ ಪಟ್ಟಿಯಲ್ಲಿ ಅಕ್ರಮ ಎಸಗಿರುವ ಬಿಎಲ್ಓ ಗಳ ಅಮಾನತುಗೊಳಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮನವಿ

ಮತದಾರ ಪಟ್ಟಿಯಲ್ಲಿ ಅಕ್ರಮ ಎಸಗಿರುವ ಬಿಎಲ್ಓ ಗಳ ಅಮಾನತುಗೊಳಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್

ನಕಲಿ ಮತಗಳನ್ನು ಸೇರಿಸಿರುವ ಬಿಎಲ್ಒಗಳನ್ನು ಅಮಾನತುಗೊಳಿಸಬೇಕು. ಕಾನೂನು ಚೌಕಟ್ಟಿನಲ್ಲಿ ಮತದಾರರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಸಲ್ಲಿಸಿದ್ದೇವೆ: ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="119482"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!