ದೊಡ್ಡತುಮಕೂರು ಕೆರೆ ನೀರು ಕಲುಷಿತ: ಪರಿಹಾರ ದೊರಕದ ಹೊರತು ಹೋರಾಟ ನಿಲ್ಲದು – ಡಾ.ಆಂಜಿನಪ್ಪ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರಿನ ಕೆರೆಯಲ್ಲಿ ನಗರದ ಒಳಚರಂಡಿ ತ್ಯಾಜ್ಯ ನೀರು ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ಸೇರಿ ಕೆರೆ ನೀರು ಕಲುಷಿತವಾಗಿದ್ದು, ರಾಸಾಯನಿಕಯುಕ್ತ ನೀರು ಬೆರೆತಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ನಮ್ಮ ಊರಿನ ಕೆರೆ ಕಲುಷಿತಗೊಳ್ಳಲು ಕಾರಣ ಹಾಗೂ ಇದಕ್ಕೆ ಪರಿಹಾರದ ಹೊರತು ಹೋರಾಟ ನಿಲ್ಲದು ಎಂದು ಗ್ರಾಮದ ಹಿರಿಯ ಮುಖಂಡರಾದ ಡಾ.ಆಂಜಿನಪ್ಪ ಸ್ಪಷ್ಟಪಡಿಸಿದ್ದಾರೆ.

ಕೆರೆ ನೀರು ಕಲುಷಿತವಾಗಲು ಒಳಚರಂಡಿ ನೀರು ಕಾರಣ ಎಂದು ಗ್ರಾಮಸ್ಥರು ಹೋರಾಟಕ್ಕೆ ಸಿದ್ದರಾಗುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು ಹಾಗೂ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆರೆ ಕಲುಷಿತಗೊಳ್ಳಲು ನಗರಸಭೆ ಸಂಸ್ಕರಣೆ ಮಾಡಿದ ನೀರು ಕಾರಣವಲ್ಲ ಎಂದಿದ್ದರು.

ಈ ಹಿನ್ನೆಲೆಯಲ್ಲಿ ಡಾ.ಆಂಜಿನಪ್ಪನವರು ಗ್ರಾಮಸ್ಥರ ಹೋರಾಟದ ಕುರಿತು ಸ್ಪಷ್ಟನೆ‌ ನೀಡಿದ್ದು, ಕೆರೆ ಕಲುಷಿತಗೊಂಡಿರುವುದು ಸತ್ಯವಾಗಿರುವುದು ವರದಿಯಲ್ಲಿ ಬಹಿರಂಗವಾಗಿದೆ. ಆದರೆ ನಾವು ಕಾರಣರಲ್ಲ ಎಂದು ನಗರಸಭೆಯವರಾಗಲಿ, ಕೈಗಾರಿಕಾ ಪ್ರದೇಶದವರಾಗಲಿ ಹೊಣೆಯಿಂದ ನುಣಿಚಿಕೊಳ್ಳುವುದು ಸಲ್ಲದು. ನಮ್ಮ ಹೋರಾಟ ಯಾರ ವಿರುದ್ಧವಲ್ಲ ನಮ್ಮೂರಿಗೆ ಕಲುಷಿತ ನೀರಿನಿಂದ ಉಂಟಾಗುವ ಸಮಸ್ಯೆ ತಪ್ಪಿಸುವುದು ನಮ್ಮ ಹೋರಾಟದ ಮೂಲ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ಮುಂದಿನ ಹೋರಾಟದ ರೂಪುರೇಷೆ ಸಿದ್ದತೆ ಮಾಡಲಾಗುವುದು. ಕೆರೆ ನೀರು ಕಲುಷಿತವಾಗಿರುವುದರಿಂದ ಅಂತರ್ಜಲ ಮಲಿನಗೊಂಡು, ಗೋವುಗಳು ಮಾತ್ರವಲ್ಲದೆ ಮನುಷ್ಯರು ಸಹ ಚರ್ಮ ಕಾಯಿಲೆ, ಕರುಳಿನ ಕಾಯಿಲೆ, ಕ್ಯಾನ್ಸರ್ ಮುಂತಾದ ಕಾಯಿಲೆಯಿಂದ ಬಳಲುವ ಆತಂಕವಿದೆ. 

ನಮ್ಮ ಊರಿನ ಕೆರೆ ನೀರು ಶುದ್ದೀಕರಣವಾಗಲು, ಸಂಬಂಧಪಟ್ಟ ಅಧಿಕಾರಿ, ಸಚಿವರು, ಶಾಸಕರ ಗಮನಕ್ಕೆ ತಂದು ಶ್ವಾಶ್ವತ ಪರಿಹಾರಬೇಕಿದೆ. ಅಲ್ಲಿಯವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಈ ನಿಟ್ಟಿನಲ್ಲಿ ದೊಡ್ಡತುಮಕೂರು ಕೆರೆ ಹೋರಾಟ ಸಮಿತಿಗೆ ನನ್ನ ಸಂಪೂರ್ಣ ಬೆಂಬಲ ಇರುತ್ತದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]