ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಸಂಭ್ರಮದ ಸಂಕ್ರಾಂತಿ: ಎಳ್ಳು ಬೆಲ್ಲ ವಿನಿಮಯ / ಹಬ್ಬಕ್ಕೆ ಮೆರುಗು ನೀಡಿದ ಶುಭಾಶಯ ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರ

ದೊಡ್ಡಬಳ್ಳಾಪುರ: ಕರೊನಾ ಆತಂಕ, ವಾರಾಂತ್ಯದ ಕಪ್ರ್ಯೂ ಹೇರಿಕೆ ಹಾಗೂ ನಿಷೇಧಾಜ್ಞೆಗಳ ನಡುವೆಯೇ ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ತಾಲೂಕಿನಾದ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. 

ಜನತೆ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಾಂತಿ ಶುಭಾಶಯಗಳನ್ನು ಕೋರಿದರು. ಮನೆಗಳ ಮುಂದೆ ಸಂಕ್ರಾಂತಿಯ ವಿಶೇಷ ಶುಭಾಶಯಗಳನ್ನು ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರವು ಹಬ್ಬಕ್ಕೆ ಮೆರುಗು ನೀಡಿದ್ದವು.

ಕಬ್ಬು, ಅವರೇ ಕಾಯಿ, ಕಡಲೇಕಾಯಿಗಳನ್ನು ಗೋವುಗಳಿಗೆ ನೇವೇದ್ಯ ಮಾಡಿ ಪೂಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರೈತರು ಮುಂಜಾನೆಯಿಂದಲೇ ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣಗಳನ್ನು ಬಳಿದು ಅಲಂಕಾರ ಮಾಡುತ್ತಿದ್ದರು. ತಾಲೂಕಿನ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮತ್ತು ಪೂಜಾ ಕಾರ್ಯಗಳು ನಡೆದವು. 

ಸಂಕ್ರಾಂತಿ ಹಬ್ಬ ದಿನವು ಸಹ ಮಾರುಕಟ್ಟೆ ಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ಅವರೆ ಕಾಯಿ, ಕಡಲೆ ಕಾಯಿ, ಕಬ್ಬು, ಗೆಣಸು ಮುಂತಾದ ಪದಾರ್ಥಗಳ ಮಾರಾಟ ಸಹ ನಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಸಂಜೆಯ ಕಾರ್ಯಕ್ರಮಗಳು: ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಮೀಣ ಪ್ರದೇಶದಲ್ಲಿ ಕಾಟಿಮರಾಯನ ಹಬ್ಬದ ಆಚರಣೆ ನಡೆದಿದೆ. ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣಗಳನ್ನು ಬಳಿದು, ಬಗೆ ಬಗೆಯ ಅಲಂಕಾರದಿಂದ ಕೂಡಿದ ಗೌನುಗಳನ್ನು ಹೊದಿಸಿ ಕೊರಳಿಗೆ ಗೆಜ್ಜೆ ಸಾರಗಳನ್ನು ಹೂವಿನ ಹಾರಗಳನ್ನು ಹಾಕಿ ವಾದ್ಯಗಳೊಂದಿಗೆ ಮರೆವಣಿಗೆ  ಮಾಡಿದರು.

ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿಸುವ, ಕಿಚ್ಚು ಹಾಯಿಸುವ ಅಚರಣೆಗಳು ಎಲ್ಲೆಡೆ ಕಂಡು ಬಂದವು. ರಾಸುಗಳಿಗೆ ಅಲಂಕಾರ ಮಾಡಿಕೊಂಡು ಮೆರವಣಿಗೆಯಲ್ಲಿ ಊರ ಹೊರಗಿರುವ ಕಾಟಿಮರಾಯನ ಗೋಪುರ ಬಳಿಗೆ ಕರೆ ತಂದು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 

ಮಣ್ಣಿನಿಂದ ಮಾಡಲ್ಪಟ್ಟ ಎತ್ತರ ಗೋಪುರಕ್ಕೆ ಸುಣ್ಣ ಮತ್ತು ಕೆಮ್ಮಣ್ಣಿನ  ಪಟ್ಟೆಗಳನ್ನು ಬಳಿದು, ಹೂವು, ಮಾವು ಮತ್ತು ಬಾಳೆಯಿಂದ ಅಲಂಕಾರ ಮಾಡಿದ್ದರು. ಕೆಲವು ಗ್ರಾಮಗಳಲ್ಲಿ ಅಂಚಿ ಕಡ್ಡಿಗಳನ್ನು ಪೋಣಿಸಿರುವುದು ಸಹ ಕಂಡು ಬಂತು. 

ಪ್ರತಿ ಮನೆಯಿಂದ ಅಕ್ಕಿ, ಕಾಳು, ಬೆಲ್ಲ ಸಂಗ್ರಹಿಸಿ ಅವುಗಳನ್ನು ಬೇಯಿಸಿ ಪ್ರಸಾದವನ್ನು ರಾಸುಗಳಿಗೆ ನೀಡುತ್ತಿದ್ದರು. ಕಾಟೀಮರಾಯನ ಗುಡಿಯಲ್ಲಿ ವಿಶೇಷ ಪೂಜೆ ನಡೆದ ನಂತರ ಊರಿನ ಕಡೆಗೆ ರಾಸುಗಳನ್ನು ಓಡಿಸಿಕೊಂಡು ಬಂದು ಕಿಚ್ಚು ಹಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]