ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿಂದು 722 ಮಂದಿಗೆ ಸೋಂಕು ದೃಢಪಟ್ಟಿದ್ದು, 48 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.16ರ ಬುಲೆಟಿನ್ ಅನ್ವಯ ಇಂದು ಜಿಲ್ಲೆಯಲ್ಲಿ ಹೊಸದಾಗಿ 722 ಕರೊನಾ ಪ್ರಕರಣಗಳು ವರದಿಯಾಗಿದೆ. ಅಲ್ಲದೆ ಕೋವಿಡ್ ಸೋಂಕಿನಿಂದ 48 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ವರದಿಯನ್ವಯ ಹೊಸಕೋಟೆ ತಾಲೂಕಿನ 73 ಪುರುಷರು, 33 ಮಹಿಳೆಯರು ಸೇರಿ 106.
ದೇವನಹಳ್ಳಿ ತಾಲೂಕಿನ 123 ಪುರುಷರು, 71 ಮಹಿಳೆಯರು ಸೇರಿ 194.
ದೊಡ್ಡಬಳ್ಳಾಪುರ ತಾಲೂಕಿನ 101 ಪುರುಷರು, 69 ಮಹಿಳೆಯರು ಸೇರಿ 170. ಹಾಗೂ ನೆಲಮಂಗಲ ತಾಲೂಕಿನ 140 ಪುರುಷರು, 112 ಮಹಿಳೆಯರು ಸೇರಿ 252 ಮತ್ತು ಒಟ್ಟು 722 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2740ಕ್ಕೆ ಏರಿಕೆಯಾಗಿದೆ. ಅಲ್ಲದೆ 5330 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 1456 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
(ಆತಂಕ ಬೇಡಾ, ಮುಂಜಾಗ್ರತೆ ಇರಲಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….