ಬೆಂ.ಗ್ರಾ.ಜಿಲ್ಲೆ: ಆಸ್ಪತ್ರೆಗಳಲ್ಲಿ ಗುಂಪು ಸೇರುವುದನ್ನು ತಪ್ಪಿಸಲು ಹಾಗೂ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ಸಲುವಾಗಿ ಜ್ವರ ಮತ್ತು ತುರ್ತು ಆರೋಗ್ಯ ಚಿಕಿತ್ಸೆಯ ಅಗತ್ಯವಿರುವ ರೋಗಿಗಳು ಮಾತ್ರ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಸಣ್ಣ ಪ್ರಮಾಣದ ಅನಾರೋಗ್ಯದಿಂದ ಬಳಲುತ್ತಿರುವ ಮತ್ತು ಹೊರರೋಗಿ ಚಿಕಿತ್ಸೆಯ ಅಗತ್ಯ ಇರುವ ರೋಗಿಗಳು ಸೇರಿದಂತೆ ದಂತ ಚಿಕಿತ್ಸೆಯ ಅಗತ್ಯವಿರುವವರು ಎರಡು ವಾರದವರೆಗೆ ಆಸ್ಪತ್ರೆಗಳಿಗೆ ಭೇಟಿ ನೀಡಬಾರದು.
ಗುಂಪು ಸೇರುವುದನ್ನು ತಪ್ಪಿಸಲು ಹಾಗೂ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ಖಾಸಗಿ ಆಸ್ಪತ್ರೆಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….