ಬೆಂಗಳೂರು: ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸುಮಾರು 11 ದಿನಗಳ ಕಾಲ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದರು. ಆದರೆ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ಐದನೇ ದಿನಕ್ಕೆ ಪಾದಯಾತ್ರೆ ಮೊಟಕುಗೊಳಿಸಿದ್ದರು.
ಪಾದಯಾತ್ರೆ ವೇಳೆ ಕಾರ್ಯನಿರ್ವಹಿಸಿದ್ದ ಕೆಲ ಪೊಲೀಸರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪೊಲೀಸರು ಕೆಲಸವೇ ಮಾಡಿಲ್ಲ. ನಮ್ಮ ಕಾರ್ಯಕರ್ತರೇ ನಮಗೆ ಭದ್ರತೆಯನ್ನು ನೀಡಿದ್ದರು ಅಂತ ಹೇಳಿದರು.
ಇನ್ನು ಮೇಕೆದಾಟು ಯೋಜನೆಯಿಂದ ಅರಣ್ಯ ನಾಶವಾಗುತ್ತದೆ ಎಂಬ ವಿಚಾರ ಬಗ್ಗೆ ಮಾತನಾಡಿದ ಡಿಕೆಶಿ, ಮೇಧಾಪಾಟ್ಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಮೇಧಾ ಪಾಟ್ಕರ್ ಏನಾದರೂ ಮಾಡಿಕೊಳ್ಳಲಿ. ಅದಕ್ಕೆ ಸರ್ಕಾರದವರು ಉತ್ತರ ನೀಡಲಿ. ನಾವು ಜನರ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಈ ಬಗ್ಗೆ ಸರ್ಕಾರವೇ ಒಂದು ಸಮಿತಿಯನ್ನು ರಚಿಸಲಿ ಎಂದು ಅಭಿಪ್ರಾಯಪಟ್ಟರು.

ಈ ಯೋಜನೆಗಾಗಿ ಮತ್ತೆ ಪಾದಯಾತ್ರೆ ಮಾಡುತ್ತೇವೆ. ಸರ್ಕಾರ ಸ್ವಲ್ಪ ನಿಯಮ ಸಡಿಲಿಸಲಿ ಪಾದಯಾತ್ರೆ ಮಾಡುತ್ತೇವೆ. 50-100 ಜನಕ್ಕೆ ಅನುಮತಿ ಕೊಟ್ಟರೂ ಪಾದಯಾತ್ರೆ ಮಾಡುತ್ತೇವೆ ಅಂತ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ತಮಿಳುನಾಡಿನವರು ನಮ್ಮ ಸೋದರರು. ಅವರು ನಮ್ಮ ಸ್ನೇಹಿತರು. ನಾವು ಭಾರತದಲ್ಲಿ ಬದುಕುತ್ತಿದ್ದೇವೆ. ಕುಮಾರಸ್ವಾಮಿ ಬಳಿ ಹೊರ ರಾಜ್ಯದವರು ಕೆಲಸ ಮಾಡುತ್ತಿಲ್ಲವೇ. ಏನೋ ಬಾಯಿ ಚಪಲಕ್ಕೆ ಮಾತನಾಡ್ತಾರೆ ಮಾತನಾಡಲಿ ಅಂತ ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….