ಖಾನಿ ಮಠದ ಭೂಮಿ ಮಾರಾಟ ಆರೋಪದಲ್ಲಿ ಹುರುಳಿಲ್ಲ: ಬಸವರಾಜ ಸ್ವಾಮೀಜಿ ಸ್ಪಷ್ಟನೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ  ಖಾನಿಮಠದ ಆಸ್ತಿಯನ್ನು ಮಠದಿಂದ  ಮಾರಾಟ ಮಾಡಲಾಗಿದೆ ಎನ್ನುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಈ ಹಿಂದಿನ ಮಠದ  ಶಾಲೆಯ ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿಯಾಗಿದ್ದ ರಾಜಶೇಖರ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮಠದ  ಬಸವರಾಜಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ನಗರದ  ಬಸವ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲುಕುಂಟೆ  ಸಮೀಪ ಮಠಕ್ಕೆ ಸೇರಿದ ಸುಮಾರು 6 ಎಕರೆ ಭೂಮಿ ಇತ್ತು. ಆ ಭೂಮಿಯಲ್ಲಿ ಮಾವಿನ ಗಿಡಗಳನ್ನು ಬೆಳೆದಿದ್ದೆವೆ. ಅದರೆ ಈ ಭೂಮಿಗೆ ತೆರಳಲು ರಸ್ತೆ ಇರಲಿಲ್ಲ. ಈ ಹಿಂದೆ ಆ ಭೂಮಿ ಗ್ರೋ ಮೋರ್ ಫುಡ್ ಗ್ರಾಂಟ್ ಅಡಿ ಮಠಕ್ಕೆ ಭೂಮಿ ಮಂಜೂರು ಆಗಿತ್ತು. ಆದರೆ ಅದು ಅಕೃತವಾಗಿರಲಿಲ್ಲ. ಇದೇ ಸಮಯದಲ್ಲಿ  ಬೇರೊಬ್ಬರು ಮಠದ ಭೂಮಿಯನ್ನು ಬಿಟ್ಟುಕೊಟ್ಟರೆ, ಸನಿಹದಲ್ಲೆ ಇರುವ ಅವರ 6 ಎಕರೆ ಭೂಮಿಯನ್ನು ನೀಡುವುದಾಗಿ ಹೇಳಿದ್ದರು. ಆ ಭೂಮಿಗೆ ರಸ್ತೆ ಕೂಡ ಇದ್ದು, ಮಠಕ್ಕೆ ಅಕೃತವಾದ ಭೂಮಿ ಸಿಗುವ ಭರವಸೆ ಮೇಲೆ ಭೂಮಿ ಬದಲಾವಣೆ ಮಾಡಿಕೊಂಡಿದ್ದೇವೆ ಹೊರತು, ಮಠದ ಭೂಮಿಯನ್ನು ಮಾರಿಲ್ಲ. ಹಿಂದಿನ ಷಡಕ್ಷರಿ ಸ್ವಾಮೀಜಿ ಪ್ರಕಾರ ಯಾರೂ ಅದನ್ನು ಮಾರಲು ಸಾಧ್ಯ ಇಲ್ಲ.

ನೋಂದಣಿ ದಾಖಲೆಯಲ್ಲಿ ಬಸವರಾಜು ಬಿನ್ ಶಿವಣ್ಣ ಎಂದು ನಮೂದಾಗಿದ್ದು, ಸ್ವಾಮೀಜಿ ಹೆಸರಿನ ಹಿಂದೆ ತಂದೆ ಹೆಸರೇಕೆ ಎಂಬ ಆರೋಪದ ಹಿನ್ನೆಲೆ ಅದನ್ನೂ ಸಹ ತಿದ್ದುಪಡಿಗೆ ನೀಡಿದ್ದೇವೆ. ಮಠದಿಂದ ನಡೆಯುತ್ತಿದ್ದ ಸರ್ಕಾರ ಅನುದಾನಿತ ಪ್ರೌಡಶಾಲೆ ವಿದ್ಯಾರ್ಥಿಗಳ ನೋಂದಣಿ ಕಡಿಮೆಯಾದ್ದರಿಂದ ಶಾಲಾ ಪರವಾನಿಗೆ ರದ್ದಾಗಿತ್ತು. ಈ ಶಾಲೆ ಮುಚ್ಚಲು ಕೂಡ ಶಾಲೆಗೆ ಮಕ್ಕಳು ನೋಂದಣಿಯಾಗದೆ ತಡೆದದ್ದು ರಾಜಶೇಖರ್ ಅವರೆ ಎಂದು ಆರೋಪ ಮಾಡಿದ ಅವರು ಖಾಲಿ ಇರುವ ಶಾಲಾ ಕಟ್ಟಡವನ್ನು ಮಠದ ವರಮಾನಕ್ಕಾಗಿ ಬೋಗ್ಯಕ್ಕೆ ನೀಡಿದ್ದೇವೆ ಹೊರತು. ಇಲ್ಲಿ ಯಾವುದೇ ದರ್ಬುಳಕೆ ಆಗಿಲ್ಲ.

ನಾನು ಇಲ್ಲಿ ಜವಾಬ್ದಾರಿ ವಹಿಸಿಕೊಂಡ ಮೇಲೆ ಹಾಸ್ಟೆಲ್, ಭೋಜನ ಕೊಠಡಿ ಸೇರಿದಂತೆ ಹಲವಾರು ಅಭಿವೃದ್ಧಿಗಳನ್ನು ಮಾಡಿದ್ದೇನೆ. ಮಠದ ಹಿತರಕ್ಷಣೆಗೆ ಬದ್ದವಿರುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ಮುಖಂಡರಾದ ವಿಶ್ವನಾಥ್, ಉಮಾಶಂಕರ್, ಪುಟ್ಟಬಸವರಾಜು, ಮುನಿರಾಜು, ಕೊನಘಟ್ಟ ಬಸವರಾಜು, ಕೆ.ಮಹಾಲಿಂಗಯ್ಯ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!