ಬೆಂ.ಗ್ರಾ.ಜಿಲ್ಲೆ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣ ಭವನದಲ್ಲಿ 2022ರ ಜನವರಿ 19 ರಂದು ಬೆಳಿಗ್ಗೆ 11:00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯು ನಡೆಯಲಿದೆ.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಸಾರಿಗೆ ಸೌಕರ್ಯಗಳ ವ್ಯವಸ್ಥೆಯ ಕುರಿತು ಬರುವ ಅಹವಾಲುಗಳ ಆಲಿಕೆ ಮತ್ತು ಮಜಲು ವಾಹನ ರಹದಾರಿಗಳ ಮಾರ್ಗದ ಕುರಿತು ಚರ್ಚಿಸಲಾಗುವುದು.
ಆಸಕ್ತ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ, ಸಾರಿಗೆ ಸೌಕರ್ಯಗಳ ವ್ಯವಸ್ಥೆಯ ಕುರಿತ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿನ್ನೀ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….