ದೊಡ್ಡಬಳ್ಳಾಪುರ: ತಾಲೂಕಿನ ಜಿ.ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಹಾಗೂ ಶಿಕ್ಷಕರಿಗೆ ಸೋಂಕು ದೃಢಪಟ್ಟಿದ್ದು, ಕಂಟೋನ್ಮೆಂಟ್ ವಲಯವೆಂದು ಘೋಷಿಸಲಾಗಿದೆ
ಶಾಲೆಯ ಶಿಕ್ಷಕರೊಬ್ಬರಿಗೆ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಇತರೆ ಶಿಕ್ಷಕರಿಗೆ ಕೋವಿಡ್ ತಪಾಸಣೆ ನಡೆಸಲಾಗಿತ್ತು.
ಈ ವರದಿ ಸೋಮವಾರ ಸಂಜೆ ವರದಿ ಬಂದಿದ್ದು, ಶಾಲೆಯ 22 ವಿದ್ಯಾರ್ಥಿಗಳು ಹಾಗೂ 7 ಶಿಕ್ಷಕರಿಗೆ ಸೋಂಕು ದೃಢ ಪಟ್ಟಿದೆ ಎಂದು ಜಿ.ಹೊಸಹಳ್ಳಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶ್ವೇತಾನಾಯ್ಕ್ ಹರಿತಲೇಖನಿಗೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಲೆಯನ್ನು ಕಂಟೋನ್ಮೆಂಟ್ ವಲಯವೆಂದು ಘೋಷಿಸಿ 7 ದಿನಗಳ ಕಾಲ ರಜೆ ಘೋಷಿಸಿ, ಸ್ಯಾನಿಟೈಸ್ ಮಾಡಿಸಲಾಗುತ್ತಿದೆ.
ಸೋಂಕಿತರು ಆರೋಗ್ಯವಾಗಿದ್ದು, ಮುಂಜಾಗ್ರತೆ ಕ್ರಮವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲವೆಂದು ಶ್ವೇತಾನಾಯ್ಕ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….