ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿಂದು 1116 ಮಂದಿಗೆ ಸೋಂಕು ದೃಢಪಟ್ಟಿದ್ದು, 196 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.18ರ ಬುಲೆಟಿನ್ ಅನ್ವಯ ಇಂದು ಜಿಲ್ಲೆಯಲ್ಲಿ ಹೊಸದಾಗಿ 1073 ಹಾಗೂ ಹೊರ ರಾಜ್ಯ, ಹೊರ ಜಿಲ್ಲೆಯ 43 ಕರೊನಾ ಪ್ರಕರಣಗಳು ವರದಿಯಾಗಿದೆ. ಅಲ್ಲದೆ ಕೋವಿಡ್ ಸೋಂಕಿನಿಂದ 196 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ವರದಿಯನ್ವಯ ಹೊಸಕೋಟೆ ತಾಲೂಕಿನ 198 ಪುರುಷರು, 109 ಮಹಿಳೆಯರು ಸೇರಿ 307.
ದೇವನಹಳ್ಳಿ ತಾಲೂಕಿನ 64 ಪುರುಷರು, 49 ಮಹಿಳೆಯರು ಸೇರಿ 113.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಆತಂಕಕಾರಿ ಬೆಳವಣಿಗೆ ಕಂಡುಬಂದಿದ್ದು 243 ಪುರುಷರು, 185 ಮಹಿಳೆಯರು ಸೇರಿ 428 ಜನರಿಗೆ ಸೋಂಕು ದೃಢಪಟ್ಟಿದೆ.
ಉಳಿದಂತೆ ನೆಲಮಂಗಲ ತಾಲೂಕಿನ 153 ಪುರುಷರು, 72 ಮಹಿಳೆಯರು ಸೇರಿ 225 ಮತ್ತು ಒಟ್ಟು 1116 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4129ಕ್ಕೆ ಏರಿಕೆಯಾಗಿದೆ. ಅಲ್ಲದೆ 978 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 4846 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಮರಣ: ಹೊಸಕೋಟೆ ತಾಲೂಕಿನ 81 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
(ಆತಂಕ ಬೇಡಾ, ಮುಂಜಾಗ್ರತೆ ಇರಲಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….