ಗಣರಾಜ್ಯೋತ್ಸವ: ಸ್ತಬ್ಧ ಚಿತ್ರ ತಿರಸ್ಕಾರ ವಿವಾದ, ರಾಜ್ಯಗಳ ಟೀಕೆ ತಪ್ಪು ನಿದರ್ಶನವೆಂದ ಕೇಂದ್ರ ಸರ್ಕಾರ

ನವದೆಹಲಿ: ಗಣರಾಜ್ಯೋತ್ಸವದ ಪರೇಡ್‌ನಿಂದ ತಮ್ಮ ಸ್ತಬ್ಧ ಚಿತ್ರಗಳನ್ನು ಹೊರಗಿಟ್ಟಿರುವುದು ಅವಮಾನ ಎಂದು ಆರೋಪಿಸಿದ್ದಕ್ಕಾಗಿ ರಾಜ್ಯಗಳನ್ನು ತರಾಟೆಗೆ ಕೇಂದ್ರ ಸರ್ಕಾರ ತೆಗೆದುಕೊಂಡಿದೆ.

ಇದು ತಪ್ಪು ನಿದರ್ಶನ ಎಂದು ಹೇಳಿದೆ ಮತ್ತು ಇದನ್ನು ನಿರ್ಧರಿಸುವುದು ಕೇಂದ್ರವಲ್ಲ, ತಜ್ಞರ ಸಮಿತಿ ಶಾರ್ಟ್ ಲಿಸ್ಟ್ ತಯಾರು ಮಾಡುತ್ತದೆ  ಎಂದು ಹೇಳಿದೆ.

ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಸ್ತಬ್ಧ ಚಿತ್ರಗಳ ಪ್ರಸ್ತಾವಗಳನ್ನು ಚರ್ಚೆಗಳ ಬಳಿಕ ತಜ್ಞರ ಸಮಿತಿ ತಿರಸ್ಕರಿಸುವುದಾಗಿ ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.  ಈ ವಿಚಾರವನ್ನು ಕೇಂದ್ರ ಮತ್ತು ರಾಜ್ಯಗಳ ನಡುವಿನ ಘರ್ಷಣೆಯಾಗಿ  ಬಿಂಬಿಸಲು ರಾಜ್ಯಗಳು ಮುಖ್ಯಮಂತ್ರಿಗಳು ಅಳವಡಿಸಿಕೊಂಡದ್ದು ತಪ್ಪು ನಿದರ್ಶನವಾಗಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆಗೆ ಹಾಳಾಗಲು ಕಾರಣವಾಗುತ್ತದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ರಾಜ್ಯಗಳು ಹಾಗೂ ಕೇಂದ್ರ ಸಚಿವಾಲಯಗಳಿಂದ 56 ಸ್ತಬ್ಧಚಿತ್ರಗಳ ಪ್ರಸ್ತಾವ ಬಂದಿದ್ದು, ಇದರಲ್ಲಿ 21 ಶಾರ್ಟ್ ಲಿಸ್ಟ್ ಮಾಡಲಾಗಿದೆ. ಸಮಯಾವಕಾಶದ ಕೊರತೆಯಿಂದ ಸ್ವೀಕರಿಸಿದ ಪ್ರಸ್ತಾವನೆಗಳಿಗಿಂತ ಹೆಚ್ಚಿನ ಪ್ರಸ್ತಾವನೆಗಳು ತಿರಸ್ಕೃತಗೊಳ್ಳುವುದು ಸಹಜ ಎಂದು ಮೂಲಗಳು ತಿಳಿಸಿವೆ. ಪ್ರತಿ ವರ್ಷ ಇದೇ ರೀತಿಯ ಆಯ್ಕೆ ಪ್ರಕ್ರಿಯೆಯನ್ನು ಅಳವಡಿಸಿಕೊಳ್ಳಲಾಗುತ್ತದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಪ್ರತಿಪಾದಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ತಮ್ಮ ರಾಜ್ಯಗಳ ಸ್ತಬ್ಧ ಚಿತ್ರಗಳನ್ನು ಕೈಬಿಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಅವರ ಮಧ್ಯಸ್ಥಿಕೆಗಾಗಿ ಒತ್ತಾಯಿಸಿದ್ದಾರೆ. ತಮ್ಮ ಸ್ತಬ್ಧ ಚಿತ್ರಗಳ ಮನವಿಯನ್ನು ತಿರಸ್ಕರಿಸುವ ಮೂಲಕ ತಮಿಳುನಾಡು ಜನರ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. 

ಪಶ್ಚಿಮ ಬಂಗಾಳದ ನೇತಾಜಿ  ಸುಭಾಷ್ ಚಂದ್ರ ಬೋಸ್ ಸ್ಥಬ್ಧ ಚಿತ್ರ ಮನವಿಯನ್ನು ಕೈಬಿಟ್ಟಿರುವುದು ರಾಜ್ಯದ ಜನರಿಗೆ ಮಾಡಿರುವ ಅಪಮಾನವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೇರಳ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರದ ನಡೆಯನ್ನು ಕೇರಳದ ರಾಜಕಾರಣಿಗಳು ಮಾತ್ರವಲ್ಲದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ  ಮತ್ತಿತರರು ಟೀಕಿಸಿದ್ದರು. 

2018 ಮತ್ತು 2021ರಲ್ಲಿ ಕೇರಳ ಸರ್ಕಾರ ಸಲ್ಲಿಸಿದ್ದ ಸ್ತಬ್ಧ ಚಿತ್ರಗಳ ಮನವಿಯನ್ನು ಪುರಸ್ಕರಿಸಲಾಗಿದೆ. ಇನ್ನು ತಮಿಳುನಾಡು ಸರ್ಕಾರದ 2016, 2017,2019,2020 ಮತ್ತು 2021ರ ಸ್ತಬ್ಧ ಚಿತ್ರಗಳಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಪಶ್ಚಿಮ ಬಂಗಾಳ ಸರ್ಕಾರದ 2016, 2019 ಮತ್ತು 2021 ರ ಸ್ತಬ್ಧ ಚಿತ್ರಗಳು ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿವೆ. ಹೀಗಾಗಿ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆಯಲ್ಲಿ ತಿಳಿಸಿದೆ.(ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಡಿ.ಕೆ. ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು, ಜಾತಿ ಮತ್ತು ಧರ್ಮಗಳ ನಡುವೆ ಒಡಕುಂಟು ಮಾಡುವ ನಾಯಕರ ಬದಲು ಇಂತಹ ನಾಯಕರ ಅಗತ್ಯ; ರಂಭಾಪುರಿ ಶ್ರೀ

ಡಿ.ಕೆ. ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು, ಜಾತಿ ಮತ್ತು ಧರ್ಮಗಳ ನಡುವೆ ಒಡಕುಂಟು

ಕನಕಪುರ: “ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ (D.K.Shivakumar) ಅವರು ಹೆಚ್ಚಿನ ಶಕ್ತಿ ತುಂಬಿದ್ದು, ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಮುಂದಿನ ದಿನಗಳಲ್ಲಿ ಆ ಸ್ಥಾನ ಸಿಗಲಿ” ಎಂದು ಬಾಳೆಹೊನ್ನೂರು

[ccc_my_favorite_select_button post_id="110652"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!