15 ದಿನಗಳ ಕಾಲ ಶಾಲಾ-ಕಾಲೇಜುಗಳನ್ನು ಬಂದ್ ಮಾಡೋದೇ ಒಳಿತು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಮೂರನೇ ಅಲೆ ಪ್ರಾರಂಭವಾಗಿದೆ. ಇನ್ನೊಂದು ವಾರದಲ್ಲಿ 3ನೇ ಅಲೆ ತೀವ್ರಗೊಳ್ಳಲಿದೆ ಎಂದು ತಜ್ಞರು ಹೇಳಿದ್ದಾರೆ. ಆ ಕಾರಣ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚುವುದೇ ಒಳಿತು ಎಂದು ಹೆಚ್​.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕರೊನಾ 3ನೇ ಅಲೆ ದಿನೇ ದಿನೇ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆ ಕುರಿತು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೆಲ ಸಲಹೆಗಳನ್ನು ನೀಡಿದ್ದಾರೆ.

ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಕೋವಿಡ್ ಅನಾಹುತಗಳ ಗ್ರಾಫ್  ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗಿದೆ. ಕರ್ಫ್ಯೂ ವಿಚಾರವಾಗಿ ಬಿಜೆಪಿ ಪಕ್ಷದ ನಾಯಕರಲ್ಲೇ ಗೊಂದಲು ಗಮನಿಸುತ್ತಿದ್ದೇನೆ. ನೈಟ್ ಕರ್ಫ್ಯೂ ಜಾರಿಗೆ ತಂದಿರೋದು ಸರಿಯಿಲ್ಲ ಅಂತಿದ್ದಾರೆ ಎಂದು ಅಸಮಾಧನ ವ್ಯಕ್ತಪಡಿಸಿದರು.

ಕೆಲ ವ್ಯಾಪಾರಿ ಸಂಘಟನೆಗಳು ಕೂಡ ರಾತ್ರಿ​​ ಕರ್ಫ್ಯೂಗೆ ವಿರೋಧ ವ್ಯಕ್ತ ಮಾಡಿವೆ. ಧಾರ್ಮಿಕ ಕ್ಷೇತ್ರದಲ್ಲಿ ಇನ್ನೊಂದೆರಡು ವಾರ ನಡೆಯಲಿವೆ. ಬಾದಾಮಿಯಲ್ಲಿ 40-40 ಸಾವಿರ ಭಕ್ತರು ಹೋಗಿದ್ದಾರೆ.

ನಾಡಿನ ಜನತೆಗೆ ವಿಶೇಷವಾಗಿ ಮನವಿ ಮಾಡ್ತೀನಿ. ಸರ್ಕಾರದ ನೀತಿ ನಿಯಮಗಳಿಂದ ಇದನ್ನು ಸರಿ ಪಡಿಸಲು ಸಾಧ್ಯವಿಲ್ಲ. ನಮ್ಮ ಜವಾಬ್ದಾರಿ ಇಲ್ಲಿ ಮುಖ್ಯವಾಗಿದೆ. ಇನ್ನೊಂದು ವರ್ಷಗಳಲ್ಲಿ ಚುನಾವಣಾ ಸಮಯ ಬರಲಿದೆ. ಆಗ ನಿಯಮಗಳನ್ನು ಉಲ್ಲಂಘನೆ ಮಾಡಿದಾಗ ಜನರು ಪ್ರಶ್ನೆ ಮಾಡ್ತಾರೆ. ಈಗಾಗಲೇ ಈ ರೀತಿ ಘಟನೆಗಳ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ದೇವರ ದಯೆಯಿಂದ ಎರಡನೇ ಅಲೆಯಂತೆ ಆಗಿಲ್ಲ. ದೊಡ್ಡ ಮಟ್ಟದ ಸಮಸ್ಯೆ, ಗಂಭೀರ ಸ್ಥಿತಿ ಇಲ್ಲ. ಇದಕ್ಕೆ ದೇವರಿಗೆ ನಾವು ಧನ್ಯವಾದ ಸಲ್ಲಿಸಬೇಕು ಎಂದರು. ನೈಟ್ ಕರ್ಫ್ಯೂ ನಿಂದ ಇದನ್ನು ತಡೆಯಬಹುದು ಎಂದು ತಜ್ಞರು ವರದಿ ನೀಡಿದ್ದಾರೋ ಗೊತ್ತಿಲ್ಲ. ಆದರೆ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ನಿಂದ ದಿನ ಗೂಲಿಯವರಿಗೆ ತೊಂದರೆ ಆಗುತ್ತಿದೆ. ಏನಾದರೂ ಬದಲಿ ವ್ಯವಸ್ಥೆ ಮಾಡಬೇಕಲ್ಲಾ ಸರ್ಕಾರ..?

ವಿಜಯಪುರ ಸೇರಿದಂತೆ ಅನೇಕ ಕಡೆ ರೈತರು ತಾವು ಬೆಳೆದ ಬೆಳೆ ಮಾರಾಟ ಮಾಡಲು ಆಗಿಲ್ಲ. ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ನಿಂದ ನಿತ್ಯ ದುಡಿದು ತಿನ್ನುವವರಿಗೆ ಸಮಸ್ಯೆ ಆಗುತ್ತಿದೆ. ಅವರ ಬದುಕು ಕಟ್ಟಿಕೊಡಲು ಏನಾದರೂ ಸಹಾಯ ಮಾಡಬೇಕು. ವಿಶೇಷ ಪ್ಯಾಕೇಜ್ ಏನಾದ್ರೂ ಘೋಷಣೆ ಮಾಡಿ ಎಂದು ಸರ್ಕಾರವನ್ನು ಎಚ್​ಡಿಕೆ ಆಗ್ರಹಿಸಿದರು. ರೈತರು ಬೆಳೆದ ಬೆಳೆ ಮಾರಾಟ ಮಾಡುವಾಗ ಅವರಿಗೆ ಸೂಚನೆ ನೀಡಿ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಮಾರ್ಗಸೂಚಿ ಪಾಲಿಸಿ ಮಾರಾಟಕ್ಕೆ ಅವಕಾಶ ಕೊಡಿ ಎಂದು ಒತ್ತಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117673"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!