ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ಸರಪಳಿಯನ್ನು ತುಂಡರಿಸಲು ಸರಕಾರ ನಿರ್ಧರಿಸಿದ್ದು, ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಮತ್ತೆ ಆರಂಭಿಸುವುದಾಗಿ ಘೋಷಿಸಿದೆ.
ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯಿತಿ. ಸಿಇಒಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಜತೆ ಮಂಗಳವಾರ ವೀಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಯಾ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.
ನಂತರ ಈ ನಿರ್ಧಾರವನ್ನು ಪ್ರಕಟಿಸಿದ್ದು, ಕೂಡಲೇ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ ಪ್ರಾರಂಭಿಸಬೇಕು. ವೈದ್ಯರು ಮತ್ತು ಎಎನ್‌ಎಂಗಳು ಮನೆ ಮನೆಗೆ ಭೇಟಿ ನೀಡಬೇಕು. ಪ್ರತೀ ಗ್ರಾಮಕ್ಕೆ ತೆರಳಿ, ಜನರನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ನೀಡಬೇಕು ಎಂದಿದ್ದಾರೆ.
ಲಸಿಕೆ ನೀಡುವುದು ಕಡಿಮೆಯಾದರೆ, ನಿರ್ಲಕ್ಷ್ಯ ಕಂಡುಬಂದರೆ ಜಿಲ್ಲಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಸಭೆಯಲ್ಲಿ ಮುಖ್ಯಮಂತ್ರಿ ತಾಕೀತು ಮಾಡಿದ್ದಾರೆ ಎಂದು ವರದಿಯಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….