ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.19ರ ಬುಲೆಟಿನ್ ಅನ್ವಯ ಇಂದು ಜಿಲ್ಲೆಯಲ್ಲಿ ಹೊಸದಾಗಿ 785 ಜನರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ ಕೋವಿಡ್ ಸೋಂಕಿನಿಂದ 186 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ವರದಿಯನ್ವಯ ಹೊಸಕೋಟೆ ತಾಲೂಕಿನ 69 ಪುರುಷರು, 36 ಮಹಿಳೆಯರು ಸೇರಿ 105.
ದೇವನಹಳ್ಳಿ ತಾಲೂಕಿನ 149 ಪುರುಷರು, 73 ಮಹಿಳೆಯರು ಸೇರಿ 222.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಆತಂಕಕಾರಿ ಬೆಳವಣಿಗೆ ಕಂಡುಬಂದಿದ್ದು 165 ಪುರುಷರು, 127 ಮಹಿಳೆಯರು ಸೇರಿ 292 ಜನರಿಗೆ ಸೋಂಕು ದೃಢಪಟ್ಟಿದೆ.
ನೆಲಮಂಗಲ ತಾಲೂಕಿನ 110 ಪುರುಷರು, 50 ಮಹಿಳೆಯರು ಸೇರಿ 160 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಉಳಿದಂತೆ ಬೆಂಗಳೂರು ಉತ್ತರ ಹಾಗೂ ಅನ್ಯ ಜಿಲ್ಲೆಯ 04 ಪುರುಷರು, 02 ಮಹಿಳೆಯರು ಸೇರಿ 06 ಮಂದಿಗೆ ಸೋಂಕು ತಗುಲಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4728ಕ್ಕೆ ಏರಿಕೆಯಾಗಿದೆ. ಅಲ್ಲದೆ 12064 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 3192 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
(ಆತಂಕ ಬೇಡಾ, ಮುಂಜಾಗ್ರತೆ ಇರಲಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….