ಬೆಂ.ಗ್ರಾ.ಜಿಲ್ಲೆ: ಮಾರ್ಚ್ 8, 2022 ರಂದು ನಡೆಯಲಿರುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಕೇಂದ್ರ ಸರ್ಕಾರವು ಪ್ರದಾನ ಮಾಡುವ 2021-22ನೇ ಸಾಲಿನ “ನಾರೀಶಕ್ತಿ ಪುರಸ್ಕಾರ” ಪ್ರಶಸ್ತಿಗಾಗಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳಿಂದ ಹಾಗೂ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
25 ವರ್ಷ ಮೇಲ್ಟಟ್ಟವರಾಗಿದ್ದು ಹಾಗೂ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಅವಧಿಯ ಸೇವೆ ಸಲ್ಲಿಸಿರುವಂತಹ ಅರ್ಹ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2022ರ ಜನವರಿ 31 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಪ್ರಶಸ್ತಿಗೆ ಇರುವ ಮಾನದಂಡಗಳ ವಿವರವನ್ನು ವೆಬ್‍ಸೈಟ್ www.awards.gov.in ಮೂಲಕ ಪಡೆಯಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಉಪ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ: 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರಾದ ನಟರಾಜ್.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….