ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದ ಸರ್ಕಾರ

ಬೆಂಗಳೂರು: ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೃಷಿ ಸಚಿವ ಬಿ.ಸಿ.ಪಾಟೀಲರೊಂದಿಗೆ ಸಮಿತಿಯಲ್ಲಿ ಚರ್ಚಿಸಿ ನೀಡಿದ ಭರವಸೆಯಂತೆ “ಸೆಕೆಂಡರಿ ಅಗ್ರಿಕಲ್ಚರ್ “ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದೆ.

ಕಳೆದ 2021 ಆಗಸ್ಟ್ 25 ರಂದು ಸೆಕೆಂಡರಿ ಅಗ್ರಿಕಲ್ಚರ್ ಸ್ಥಾಪಿಸುವ ನಿಟ್ಟಿನಲ್ಲಿ ಸಿಎಂ ಜೊತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೇಂದ್ರದ ಆದಾಯ ದ್ವಿಗುಣೊಳಿಸುವ ಸಮಿತಿಯ ಮುಖ್ಯಸ್ಥರೊಂದಿಗೆ ಸಮಿತಿ ಸಭೆ ನಡೆಸಿದ್ದು, ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಸರ್ಕಾರ ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ 13 ಜನರ ಸದಸ್ಯರನ್ನೊಳಗೊಂಡ ಸಮಿತಿ “ಸೆಕೆಂಡರಿ ಅಗ್ರಿಕಲ್ಚರ್ “ನಿರ್ದೇಶಾನಲಯ ಸ್ಥಾಪಿಸಿ ಆದೇಶಿಸಲಾಗಿದೆ.

ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾ ವಸ್ತುವಾಗಿ ಬಳಸಿಕೊಂಡು  ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ಯ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಿಸುವುದು ಸೆಕೆಂಡರಿ ಅಗ್ರಿಕಲ್ಚರ್ ನ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಏನಿದು ಸೆಕೆಂಡರಿ ಅಗ್ರಿಕಲ್ಚರ್..?: ಗ್ರಾಮೀಣ ಮಟ್ಟದಲ್ಲಿ ಗುಡಿ ಕೈಗಾರಿಕೆ ಎಂದು ಪರಿಗಣಿಸಬಹುದಾದ ಚಟುವಟಿಕೆಯು ಸ್ಥಳೀಯ ಮತ್ತು ಸುತ್ತಮುತ್ತಲಿನ ರೈತರ ಆರ್ಥಿಕ ಮಟ್ಟ ಹೆಚ್ಚಳಕ್ಕೆ ಕೊಡುಗೆ ನೀಡುವ ಪ್ರಮಾಣದಲ್ಲಿ ಇರುವುದು ಸೆಕೆಂಡರಿ ಕೃಷಿಯಾಗಿದ್ದಯಮ ಸ್ಥಳೀಯವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಲಭ್ಯವಾಗುವ ಮೂಲ ಹಾಗೂ ಕಚ್ಚಾ ವಸ್ತುಗಳ್ನು ಮಾನವ ಶಕ್ತಿ ಕೌಶಲ್ಯಗಳನ್ನು ಮೂಲವಾಗಿ ಸದಯೋಗಪಡಿಸಿಕೊಂಡು ಅಳವಡಿಸುವ ಸಮಗ್ರ ಚಟುವಟಿಕೆಗಳನ್ನು “ಸೆಕೆಂಡರಿ ಕೃಷಿ”ಯಡಿ ಪರಿಗಣಿಸಬಹುದಾಗಿದೆ. ಸ್ಥಳೀಯವಾಗಿ ಉತ್ಪಾದಿಸಲಾದ ಕಚ್ಚಾ ವಸ್ತುವು ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಸಂಸ್ಕರಣೆಗೆ ಒಳಗಾಗಿದ್ದರೆ ಮತ್ತು ಅಂತಹ ಕಚ್ಚಾವಸ್ತುಗಳಿಂದ ಮೌಲ್ಯವರ್ಧಿತಗೊಳಿಸಿವ ಪ್ರಾಥಮಿಕ ಉತ್ಪಾದನೆಯನ್ನು ಉದ್ಯಮಕ್ಕೆ ಸರಬರಾಜು ಮಾಡಿದರೆ ಅದನ್ನು ಸೆಕೆಂಡರಿ ಕೃಷಿಗೆ ಪರಿಗಣಿಸಬಹುದಾಗಿದೆ.

ಜೇನುಸಾಕಾಣೆ,ಜೈವಿಕ ಗೊಬ್ಬರ ಘಟಕಗಳು, ಸಾವಯವ ಬಣ್ಣ ಅಥವಾ ಡೈ ತಯಾರಿಕೆ, ಅಣಬೆ, ರೇಷ್ಮೆ ಹುಳು ಸಾಕಣೆ, ನರ್ಸರಿ ಇತ್ಯಾದಿಗಳಂತಹ ಸಣ್ಣ ಪ್ರಮಾಣದ ಚಟುವಟಿಕೆಗಳು ಸೆಕೆಂಡರಿ ಕೃಷಿಗೆ ಉತ್ತಮ ಉದಾಹರಣೆಯಾಗಿದೆ.ಸ್ಥಳೀಯವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಲಭ್ಯವಾಗುವ ಮೂಲ/ಕಚ್ಛಾ ವಸ್ತುಗಳನ್ನು ಮಾನವ ಶಕ್ತಿ,ಕೌಶಲ್ಯಗಳನ್ನು ಮೂಲವಾಗಿ ಸದುಪಯೋಗಪಡಿಸಿಕೊಂಡು ಅಳವಡಿಸುವ ಸಮಗ್ರ ಚಟುವಟಿಕೆಗಳು ಸೆಕೆಂಡರಿ ಕೃಷಿಗೆ ಉತ್ತಮ ಉದಾಹರಣೆಯಾಗಿವೆ.

ರೇಸ್ ಕುದುರೆಗಳ ಸಾಕಣೆ, ವನ್ಯಜೀವಿ ಮೀಸಲು ಪ್ರದೇಶಗಳ ಅಭಿವೃದ್ಧಿ, ದೊಡ್ಡ ಔಷಧೀಯ ಮತ್ತು ಕೃಷಿ ರಾಸಾಯನಿಕ ಉದ್ಯಮಗಳು, ದೊಡ್ಡ ಕೃಷಿ ಕೈಗಾರಿಕೆಗಳನ್ನು ಸೆಕಂಡಿ ಅಗ್ರಿಕಲ್ಚರ್ ಎಂದು ಪರಿಗಣಿಸಲಾಗದು.

ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ತ್ಪನ್ನ ಮತ್ತು ಉಪಉತ್ಪನ್ನಗಳ ಕಚ್ಚಾ ವಸ್ತುವಾಗಿ ಬಳಸಿಕೊಂಡು ಉತ್ಪಾದಕ ಚಟುವಟಿಕೆ ಮಾಡುವುದು. ಸ್ಥಳೀಯವಾಗಿ ಲಭ್ಯವಿರುವ ಮಾನವ ಸಂಪನ್ಮೂಲ ಬಳಕೆಗಾಗೊ ಕೌಶಲ್ಯ ತರಬೇತಿಗಳನ್ನು ನೀಡಿ ಉದ್ಯಮ ಚಟುವಟಿಕೆ ಮಾಡುವುದು. ಎಂ.ಎಸ್.ಎಂ.ಈ.ಡಿ ಕಾಯಿದೆ 2006 ಅಡಿಯಲ್ಲಿ ವರ್ಗೀಕರಿಸಲಾದ ಸಣ್ಣ ಅಥವಾ ಮಧ್ಯಮ ಉದ್ಯಮಗಳನ್ನು ಅಭಿವೃದ್ಧಿಪಡಿಸುವುದು.

ಸಾವಯವ ಗೊಬ್ಬರ ತಯಾರಿಕೆ, ತೋಟಗಾರಿಕೆ ಹೂವು ಅರಣ್ಯ ಕೃಷಿ ಬೆಳೆಗಳ ನರ್ಸರಿ, ಜೈವಿಕ ಕೀಟನಾಶಕಗಳ ತಯಾರಿಕೆ, ನೀರು ಮತ್ತು ಮಣ್ಣು ಪರೀಕ್ಷೆ, ಪಶು ಆಹಾರ ಮೇವು ಉತ್ಪಾದನೆ ಇತ್ಯಾದಿಗಳ ಉತ್ಪಾದಿತ ಬೆಳೆಗಳ ಮೌಲ್ಯವರ್ಧನೆ ಮಾಡುವುದು. ಕಟಾವು ಆದ ನಂತರ  ಹೂವು,ಹಣ್ಣು ಸಾಂಬಾರು ಪದಾರ್ಥಗಳ ಇತ್ಯಾದಿಗಳನ್ನು ಪೂರ್ವಸಿದ್ಧತೆಗೊಳಿಸಿ ಮಾರುಕಟ್ಟೆಗೆ ತಲುಪಿಸುವುದು. ಅತಿಸಣ್ಣ, ಸಣ್ಣ ಉದ್ದಿಮೆಗಳಾದ ಉಪ್ಪಿನಕಾಯಿ, ಜಾಮ್ ತಯಾರಿಕೆ ಅರಿಶಿನ ಪುಡಿ, ಶುಂಠಿಬೆಳ್ಳುಳ್ಳಿ ಪೇಸ್ಟ್ ಬಾಡಿಗೆ ಆಧಾರಿತ ಸೇವಾ ಕೇಂದ್ರಗಳು, ಅಗ್ರಿ ಟೂರಿನಂ, ಆಯುಷ್ ಮೆಡಿಸಿನ್ಸ್, ನೇಯ್ಗೆ  ಉತ್ಪನ್ನಗಳು, ಸುಗಂಧ ದ್ರವ್ಯ,ಡೈಗಳನ್ನು ಇತ್ಯಾದಿ ಮೌಲ್ಯ ವರ್ದನೆ ಕೇಂದ್ರಿತ ಚಟುವಟಿಕೆಗಳನ್ನು ಮಾಡುವುದು. 

ಸೆಕೆಂಡರಿ ಅಗ್ರಿಕಲ್ಚರ್ ಅಡಿ ಜೇನು ಸಾಕಾಣೆ, ಬೇವಿನ ಉತ್ಪನ್ನಗಳು, ಕಾರ್ನ್ ಪೌಡರ್ ತಯಾರಿಕೆ,ಹೈಡ್ರೋಪೋನಿಕ್ಸ್,ಕೈತೋಟ,ಅಡಿಕೆ ಹಾಳೆ ಉತ್ಪನ್ನಗಳು, ಅಲೊವೆರಾ ಉತ್ಪನ್ನಗಳು, ಬಿದಿರು ಉತ್ಪನ್ನಗಳು, ಅಂಟು ಉತ್ಪಾದನೆ,ರೇಷ್ಮೆ ಉತ್ಪನ್ನಗಳು, ಕುರಿಮರಿ ಹೊಸ ತಳಿ ಸಾಕಣೆ,ಹೋರಿ ಸಾಕಣೆ, ಡಯಾಂಚ ಬೆಳೆಸುವ ಮೂಲಕ ಪರ್ಯಾಯ/ಪೂರಕ ಉದ್ಯಮಗಳಿಗೆ ಉತ್ತೇಜಿಸುವುದು. ಹತ್ತಿ ಬೆಳೆ ಉಳಿಕೆಯ ಉತ್ಪನ್ನಗಳು,ಹತ್ತಿ ಭತ್ತದ ಉಳಿಕೆಯಿಂದ ಪೈಬರ್ ಬೋರ್ಡ್ ಯಾರಿಸುವುದು, ಕತ್ತಾಳೆ ಬಾಳೆ ನಾರಿನ ತ್ಪನ್ನಗಳು, ಅಡಿಕೆ ಹಾಳೆ ಉತ್ಪನ್ನಗಳು, ಬಯೋಗ್ಯಾಸ್ ಉತ್ಪಾದನೆ, ಯೂರಿಯಾ ಲೇಪಿಸಿಸಿ ಮೇವಿನ ಬ್ಲಾಕ್ ಗಳ ತಯಾರಿಕೆ, ಕಬ್ಬು ಸೋಗೆಯಿಂದ ತ್ಪ್ನಗಳ ತಯಾರಿಕೆ ಸೇರಿದಂತೆ ಮುಂತಾದ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಶು ಸಂಗೋಪನಾ ತ್ಯಾಜ್ಯಗಳನ್ನು ಮರುಬಳಸಬಹುದಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!