ಬೆಂ.ಗ್ರಾ.ಜಿಲ್ಲೆ: ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಪಿಎಂ-ಎಫ್ಎಂಇ ಯೋಜನೆಯ “ಒಂದು ಜಿಲ್ಲೆ ಒಂದು ಉತ್ಪನ್ನ” ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಕೋಳಿ ಸಂಸ್ಕರಣಾ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ” ಘಟಕಗಳು, ವ್ಯಕ್ತಿ/ ಸಂಸ್ಥೆಗಳು, ಎಫ್.ಪಿ.ಓ ಗಳನ್ನು ಉದ್ದಿಮೆದಾರರಾಗಿ ರೂಪಿಸಲು ಯೋಜಿಸಲಾಗಿದ್ದು, ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಶೇ.50 ಕ್ಕೆ ಸಹಾಯಧನವನ್ನು ಹೆಚ್ಚಳ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ತಿಳಿಸಿದ್ದಾರೆ.
ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ ಅತಿ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ಸಾಂಸ್ಥೀಕರಣಗೊಳಿಸುವಿಕೆ ಯೋಜನೆ ( PM-FME) ಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಹೊಸ ಉದ್ದಿಮೆ ಸ್ಥಾಪಿಸಲು/ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಕರಣಾ ಘಟಕವನ್ನು ಉನ್ನತೀಕರಿಸಲು ಅವಕಾಶವಿದ್ದು, “ಒಂದು ಜಿಲ್ಲೆ ಒಂದು ಉತ್ಪನ್ನ” ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಕೋಳಿ ಸಂಸ್ಕರಣಾ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ” ಘಟಕಗಳು, ವ್ಯಕ್ತಿ/ ಸಂಸ್ಥೆಗಳು, ಎಫ್.ಪಿ.ಓ ಗಳನ್ನು ಉದ್ದಿಮೆದಾರರಾಗಿ ರೂಪಿಸಲು ಯೋಜಿಸಲಾಗಿದೆ.
ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಈವರೆಗೆ ಕೇಂದ್ರ ಸರ್ಕಾರದಿಂದ ಶೇ. 35 ರಷ್ಟು ಸಹಾಯಧನವನ್ನು ನೀಡಲಾಗುತ್ತಿತ್ತು. ಪ್ರಸ್ತುತ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ. 15 ರಷ್ಟು ಹೆಚ್ಚುವರಿ (ರೂ. 10 ಲಕ್ಷದ ಗರಿಷ್ಟ ಮಿತಿ) ಸಹಾಯಧನವನ್ನು ನೀಡಲಿದೆ.
ಈ ಯೋಜನೆಯು 2020-21ರಿಂದ ಪ್ರಾರಂಭವಾಗಿ 2024-25ರವರೆಗೆ ಅನುಷ್ಠಾನಗೊಳ್ಳಲಿದೆ.
ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಈವರೆಗೆ ಕೇಂದ್ರ ಸರ್ಕಾರದಿಂದ ಶೇ. 35 ರಷ್ಟು ಸಹಾಯಧನವನ್ನು ನೀಡಲಾಗುತ್ತಿತ್ತು. ಪ್ರಸ್ತುತ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ. 15 ರಷ್ಟು ಹೆಚ್ಚುವರಿ (ರೂ. 10 ಲಕ್ಷದ ಗರಿಷ್ಟ ಮಿತಿ) ಸಹಾಯಧನವನ್ನು ನೀಡಲಿದೆ.
ಆಸಕ್ತ ವೈಯಕ್ತಿಕ ಫಲಾನುಭವಿಗಳು, ಸಂಘ ಸಂಸ್ಥೆಗಳು ಎಫ್.ಪಿ.ಓ.ಗಳು ಸ್ವ ಸಹಾಯ ಗುಂಪುಗಳ ಸದಸ್ಯರು, ಒಕ್ಕೂಟಗಳು, ಸಹಕಾರಿ ಸಂಸ್ಥೆಗಳು ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ನೋಂದಣಿಗಾಗಿ ತಿರುಮಲೇಶ್ ಮೊ. ಸಂ.: 9448752379 ಮತ್ತು ಸಚ್ಚಿದಾನಂದಮ್ ಮೊ.ಸಂ.: 9952913999 ಇವರನ್ನು ಸಂಪರ್ಕಿಸಬಹುದಾಗಿದೆ.
ಆಸಕ್ತ ಫಲಾನುಭವಿಗಳು ಪೋರ್ಟಲ್ PMFME website link : http://pmfme.mofpi.gov.in, PMFME MIS website link : http://pmfme.mofpi.gov.in/mis ಮೂಲಕ ಅರ್ಜಿಗಳನ್ನು ನೋಂದಾಯಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಸರ್ಕಾರದ PMFME website ಅಥವಾ ಜಿಲ್ಲಾ ನೋಡಲ್ ಅಧಿಕಾರಿ ಮಥುರಾ ಎಸ್ .ಪೈ., ಸಹಾಯಕ ಕೃಷಿ ನಿರ್ದೇಶಕರು(ರೈತ ಮಹಿಳೆ) ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಬನಶಂಕರಿ, ಬೆಂಗಳೂರು ಮೊ.ಸಂ.: 8277929923, 9632862326 ಇವರನ್ನು ಸಂಪರ್ಕಿಸಬಹುದಾಗಿದೆ.
ಆಸಕ್ತ ರೈತರು ಮತ್ತು ಆಹಾರ ಸಂಸ್ಕರಣೆಯಲ್ಲಿ ತೊಡಗಿರುವ ಉದ್ಯಮಿಗಳು ಈ ಯೋಜನೆಯ ಉಪಯೋಗ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕರಾದ ಜಿ.ಎಸ್.ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಗ್ರಹ ಚಿತ್ರ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….