ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳವರೆಗೆ ಪ್ರವೇಶ ಪಡೆದಿರುವ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು “ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ”ಯಡಿ ಶಿಷ್ಯವೇತನ ನೀಡಲಾಗುವುದು.
ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಪಡೆಯಲು ಅರ್ಹರಾಗಿದ್ದು, ಪ್ರೌಢಶಿಕ್ಷಣ (8 ರಿಂದ 10ನೇ ತರಗತಿವರೆಗೆ) ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೂ 2021-22ನೇ ಆರ್ಥಿಕ ವರ್ಷದಿಂದ ವಿಧ್ಯಾರ್ಥಿ ವೇತನ ಸೌಲಭ್ಯ ವಿಸ್ತರಣೆ ಮಾಡಲಾಗಿದೆ.
2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರ್ವ ಶಿಕ್ಷಣ ಕೋರ್ಸ್‍ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ಯಾಟ್ಸ್ ಐಡಿ(Sats ID) ಮತ್ತು ಎಫ್‍ಐಡಿ(FID) ಅನ್ವಯ ಅರ್ಹರನ್ನು ಗುರುತಿಸಿ ಪಾವತಿಸಲಾಗುವುದು. ಇತರೆ ಎಲ್ಲಾ ಕೋರ್ಸ್‍ಗಳ ರೈತರ ಮಕ್ಕಳು ಜಾಲತಾಣ https://ssp.postmatric.karnataka.gov.in/ ದಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಬೇಕು. ತಂದೆ ಅಥವಾ ತಾಯಿಯ ರೈತರ ಗುರುತಿನ ಸಂಖ್ಯೆ (ಎಫ್‍ಐಡಿ) ಹೊಂದಿರಬೇಕು. ಎಫ್‍ಐಡಿ ನೊಂದಣಿ ಮಾಡಲು ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು.
ಪ್ರೌಢಶಿಕ್ಷಣ(8 ರಿಂದ 10ನೇ ತರಗತಿವರೆಗೆ) ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ ರೂ.2000, ಪದವಿಯ ಮುಂಚೆ ಪಿ.ಯು.ಸಿ., ಐ.ಟಿ.ಐ ಮತ್ತು ಡಿಪ್ಲೋಮಾದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ(ಪುರುಷರು) ರೂ.2500 ಹಾಗೂ ವಿದ್ಯಾರ್ಥಿನಿಯರು ಮತ್ತು ಅನ್ಯಲಿಂಗದವರಿಗೆ ರೂ.3000, ಬಿ.ಎ, ಬಿ.ಎಸ್.ಸಿ, ಬಿ.ಕಾಂ, ಇತ್ಯಾದಿ (ಎಂ.ಬಿ.ಬಿ.ಎಸ್, ಬಿ.ಇ., ಬಿ.ಟೆಕ್ ಮತ್ತು ವೃತ್ತಿಪರ ಕೋರ್ಸ್‍ಗಳನ್ನು ಹೊರತುಪಡಿಸಿ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ(ಪುರುಷರು) ರೂ.5000 ಹಾಗೂ ವಿದ್ಯಾರ್ಥಿನಿಯರು ಮತ್ತು ಅನ್ಯಲಿಂಗದವರಿಗೆ ರೂ.5000, ಎಲ್.ಎಲ್.ಬಿ., ಪ್ಯಾರ ಮೆಡಿಕಲ್, ಬಿ. ಫಾರ್ಮ್, ನರ್ಸಿಂಗ್ ಇತ್ಯಾದಿ, ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ(ಪುರುಷರು) ರೂ.7500 ಹಾಗೂ ವಿದ್ಯಾರ್ಥಿನಿಯರು ಮತ್ತು ಅನ್ಯಲಿಂಗದವರಿಗೆ ರೂ.8000, ಎಂ.ಬಿ.ಬಿ.ಎಸ್., ಬಿ.ಇ, ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ(ಪುರುಷರು) ರೂ.10000 ಹಾಗೂ ವಿದ್ಯಾರ್ಥಿನಿಯರು ಮತ್ತು ಅನ್ಯಲಿಂಗದವರಿಗೆ ರೂ.11000 ಪಾವತಿಸಲಾಗುವುದು.
ಪುನರಾವರ್ತಿತ ವಿದ್ಯಾರ್ಥಿಗಳು(ರಿಪೀಟರ್ಸ್) ಈ ಶಿಷ್ಯವೇತನದ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಂಟಿ ಕೃಷಿ ನಿರ್ದೇಶಕರಾದ ಜಿ.ಎಸ್.ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….