ದೊಡ್ಡಬಳ್ಳಾಪುರ: ತಾಲೂಕಿನ ಬಚ್ಚಹಳ್ಳಿಯಲ್ಲಿನ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ ಮಕ್ಕಳಿಗೆ ಸೋಂಕು ದೃಢಪಟ್ಟಿದ್ದು, ಸೋಮವಾರದವರೆಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಶಾಲೆಯ ಪ್ರಾಂಶುಪಾಲರಾದ ಲಕ್ಷ್ಮೀಪತಿ ಹರಿತಲೇಖನಿಗೆ ಮಾಹಿತಿ ನೀಡಿದ್ದು, ಜ್ವರ, ನೆಗಡಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದಾಗ 08 ಮಕ್ಕಳಿಗೆ ಸೋಂಕು ದೃಢ ಪಟ್ಟಿದೆ.
ಈ ಹಿನ್ನೆಲೆಯಲ್ಲಿ ಶಾಲೆಯನ್ನು ಮೂರು ದಿನಗಳ ಕಾಲ ರಜೆ ಘೋಷಿಸಿದ್ದು, ಸ್ಯಾನಿಟೈಸ್ ಮಾಡಿಸಲಾಗುತ್ತಿದೆ.
ಮಕ್ಕಳು ಆರೋಗ್ಯವಾಗಿದ್ದು, ಮುಂಜಾಗ್ರತೆಯ ಕ್ರಮವಾಗಿ ಪೋಷಕರ ಜೊತೆ ಮನೆಗೆ ಕಳುಹಿಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
ಮಕ್ಕಳಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಶಾಲೆಯ ಬಳಿ ದೌಡಾಯಿಸಿರುವ ಪೋಷಕರು, ಮಕ್ಕಳ ಕರೆದೊಯ್ಯಲು ಶಾಲೆಯ ಗೇಟ್ ಮುಂದೆ ಕಾದು ನಿಂತಿರುವ ದೃಶ್ಯ ಮನಕಲುಕುವಂತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….