ಬೆಂ.ಗ್ರಾ.ಜಿಲ್ಲೆ: ಶಿಷ್ಯವೇತನಕ್ಕಾಗಿ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳವರೆಗೆ ಪ್ರವೇಶ ಪಡೆದಿರುವ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು “ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ”ಯಡಿ  ಶಿಷ್ಯವೇತನ ನೀಡಲಾಗುವುದು.

ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಪಡೆಯಲು ಅರ್ಹರಾಗಿದ್ದು, ಪ್ರೌಢಶಿಕ್ಷಣ (8 ರಿಂದ 10ನೇ ತರಗತಿವರೆಗೆ) ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೂ 2021-22ನೇ ಆರ್ಥಿಕ ವರ್ಷದಿಂದ ವಿಧ್ಯಾರ್ಥಿ ವೇತನ ಸೌಲಭ್ಯ ವಿಸ್ತರಣೆ ಮಾಡಲಾಗಿದೆ.

2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರ್ವ ಶಿಕ್ಷಣ ಕೋರ್ಸ್‍ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ಯಾಟ್ಸ್ ಐಡಿ(Sats ID)  ಮತ್ತು ಎಫ್‍ಐಡಿ(FID)  ಅನ್ವಯ ಅರ್ಹರನ್ನು ಗುರುತಿಸಿ ಪಾವತಿಸಲಾಗುವುದು. ಇತರೆ ಎಲ್ಲಾ ಕೋರ್ಸ್‍ಗಳ ರೈತರ ಮಕ್ಕಳು ಜಾಲತಾಣ https://ssp.postmatric.karnataka.gov.in/ ದಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.  

ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಬೇಕು. ತಂದೆ ಅಥವಾ ತಾಯಿಯ ರೈತರ ಗುರುತಿನ ಸಂಖ್ಯೆ (ಎಫ್‍ಐಡಿ) ಹೊಂದಿರಬೇಕು. ಎಫ್‍ಐಡಿ ನೊಂದಣಿ ಮಾಡಲು ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು. 

ಪ್ರೌಢಶಿಕ್ಷಣ(8 ರಿಂದ 10ನೇ ತರಗತಿವರೆಗೆ) ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ ರೂ.2000, ಪದವಿಯ ಮುಂಚೆ ಪಿ.ಯು.ಸಿ., ಐ.ಟಿ.ಐ ಮತ್ತು ಡಿಪ್ಲೋಮಾದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ(ಪುರುಷರು) ರೂ.2500 ಹಾಗೂ ವಿದ್ಯಾರ್ಥಿನಿಯರು ಮತ್ತು ಅನ್ಯಲಿಂಗದವರಿಗೆ ರೂ.3000, ಬಿ.ಎ, ಬಿ.ಎಸ್.ಸಿ,  ಬಿ.ಕಾಂ, ಇತ್ಯಾದಿ (ಎಂ.ಬಿ.ಬಿ.ಎಸ್, ಬಿ.ಇ., ಬಿ.ಟೆಕ್ ಮತ್ತು ವೃತ್ತಿಪರ ಕೋರ್ಸ್‍ಗಳನ್ನು ಹೊರತುಪಡಿಸಿ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ(ಪುರುಷರು) ರೂ.5000 ಹಾಗೂ ವಿದ್ಯಾರ್ಥಿನಿಯರು ಮತ್ತು ಅನ್ಯಲಿಂಗದವರಿಗೆ ರೂ.5000, ಎಲ್.ಎಲ್.ಬಿ., ಪ್ಯಾರ ಮೆಡಿಕಲ್, ಬಿ. ಫಾರ್ಮ್, ನರ್ಸಿಂಗ್ ಇತ್ಯಾದಿ, ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ(ಪುರುಷರು) ರೂ.7500 ಹಾಗೂ ವಿದ್ಯಾರ್ಥಿನಿಯರು ಮತ್ತು ಅನ್ಯಲಿಂಗದವರಿಗೆ ರೂ.8000, ಎಂ.ಬಿ.ಬಿ.ಎಸ್., ಬಿ.ಇ, ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ(ಪುರುಷರು) ರೂ.10000 ಹಾಗೂ ವಿದ್ಯಾರ್ಥಿನಿಯರು ಮತ್ತು ಅನ್ಯಲಿಂಗದವರಿಗೆ ರೂ.11000 ಪಾವತಿಸಲಾಗುವುದು.

ಪುನರಾವರ್ತಿತ ವಿದ್ಯಾರ್ಥಿಗಳು(ರಿಪೀಟರ್ಸ್) ಈ ಶಿಷ್ಯವೇತನದ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಂಟಿ ಕೃಷಿ ನಿರ್ದೇಶಕರಾದ ಜಿ.ಎಸ್.ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!