ದೊಡ್ಡಬಳ್ಳಾಪುರ: ವಾಹನ ತಪಾಸಣೆ ವೇಳೆ ದ್ವಿಚಕ್ರ ವಾಹನದಲ್ಲಿ ಮೂವರು ಬಂದಿದ್ದನ್ನು ತಡೆದ ಪೊಲೀಸರಿಗೆ ಗಾಂಜ ಮಾರಾಟಗಾರರು ಸಿಕ್ಕಿಬಿದ್ದಿರುವ ಘಟನೆ ಕುರುಬರಹಳ್ಳಿ ಬಳಿ ನಡೆದಿದೆ.
ಶುಕ್ರವಾರ ಸಂಜೆ ನಗರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಗೋವಿಂದ್ ನೇತೃತ್ವದಲ್ಲಿ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುವ ವೇಳೆ ದಾಬಸ್ ಪೇಟೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರನ್ನು ತಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಸವಾರರು ಅನುಮಾನಸ್ಪದವಾಗಿ ವರ್ತಿಸಿದ ಕಾರಣ ಅವರ ಬಳಿಯಿದ್ದ ಬ್ಯಾಗ್ ಪರಿಶೀಲನೆ ಮಾಡಿದಾಗ ಸುಮಾರು 20 ಸಾವಿರಕ್ಕೂ ಹೆಚ್ಚು ಮೌಲ್ಯದ ಗಾಂಜಾ ಸೊಪ್ಪು ಪತ್ತೆಯಾಗಿದೆ.
ಈ ಕುರಿತಂತೆ ಕೋಳಾಲ ವ್ಯಾಪ್ತಿಯ ರಂಗ (25), ದೊಡ್ಡಬಳ್ಳಾಪುರ ನಗರದ ರಾಕೇಶ್ (20), ತನುಶ್ (25) ಎನ್ನುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….