ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷರಾಗಿ ಜೆ.ರಾಜೇಂದ್ರ ಅವರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಆರ್ಯ ಈಡಿಗರ ಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜೇಂದ್ರ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ನೂತನವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಜೇಂದ್ರ ಅವರನ್ನು ಮುಖಂಡರಾದ ಸಂಪತ್ ಕುಮಾರ್, ಪೋತುರಾಜು, ಲಯನ್ ಎಂ.ಆರ್.ಶ್ರೀನಿವಾಸ್, ಆರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆಯ ಎಇಇ ರಮೇಶ್, ನಿಯೋಜನಾಧಿಕಾರಿ ಬಾಬುರೆಡ್ಡಿ, ಪ್ರೋ.ಶಂಕರ್, ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ವ್ಯವಸ್ಥಾಪಕ ಎಸ್.ರವಿಕುಮಾರ್ ಅಭಿನಂದನೆ ಸಲ್ಲಿಸಿದರು.
ಜ.9ರಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆ.ರಾಜೇಂದ್ರ ಅವರು 145 ಮತಗಳ ಅಂತರದಿಂದ ವಿಜೇತರಾಗಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….
 
				 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						