ಬೆಂಗಳೂರು: ಟೌನ್ ಹಾಲ್ ಮುಂದೆ ಲಾರಿಯೊಂದು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ವಿಜಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ (49) ಮೃತಪಟ್ಟಿದ್ದಾರೆ.
ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ತೆರಳುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದರು.
ಗಂಗಾಧರ ಮೂರ್ತಿ ಅವರ ಪತ್ರಕರ್ತ ವೃತ್ತಿ ಸೇವೆ ಗುರುತಿಸಿ ಕಳೆದ ವರ್ಷ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಕಾರ್ಯ ನಿರತ ಪತ್ರಕರ್ತರ ಸಂಘ ಸನ್ಮಾನಿಸಿತ್ತು.
ಸಂತಾಪ: ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ನಿಧನಕ್ಕೆ ವಿಜಯವಾಣಿ ಬಳಗ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….