ದೊಡ್ಡಬಳ್ಳಾಪುರ: ಕರ್ನಾಟಕ ಜಾನಪದ ಅಕಾಡೆಮಿಯ 2021ರ ಪ್ರಶಸ್ತಿಗೆ ಭಾಜನರಾಗಿರುವ ಚನ್ನದೇವಿ ಅಗ್ರಹಾರದ ಕಥೆಗಾರ ತಿಮ್ಮಯ್ಯರನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಗೋವಿಂದರಾಜ್ ಅಭಿನಂದಿಸಿದರು,
ನೆಲಮಂಗಲ ತಾಲೂಕಿನ ಹುರುಳಿಹಳ್ಳಿ ಗ್ರಾಮದಲ್ಲಿ ಮಗಳ ಮನೆಯಲ್ಲಿ ವಾಸವಾಗಿರುವ ಕಥೆಗಾರ ತಿಮ್ಮಯ್ಯ ಅವರನ್ನು ಅಭಿನಂದಿಸಿ ಮಾತನಾಡಿದರು.
ದೊಡ್ಡಬಳ್ಳಾಪುರ ತಾಲೂಕಿನ ಚನ್ನದೇವಿ ಅಗ್ರಹಾರ ಗ್ರಾಮದ ಹಿರಿಯರಾದ ತಿಮ್ಮಯ್ಯರವರಿಗೆ ಪ್ರಶಸ್ತಿ ಘೋಷಣೆ ಆಗಿರುವುದು ಸಂತಸದ ವಿಚಾರ. ಇಂತಹ ಪ್ರತಿಭಾವಂತ ಕಲಾವಿದರನ್ನು ಗುರುತಿಸಿರುವು ನಮ್ಮ ರಾಜ್ಯಕ್ಕೆ ಸಂತಸ ತರುವಂತ ವಿಚಾರವಾಗಿದೆ, ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಸಾಧಾರಣ ಪ್ರತಿಭೆಗಳನ್ನು ಗುರುತಿಸುವ ಕಾರ್ಯನಿರ್ವಹಿಸುತ್ತದೆ ಎಂದರು.
ನೆಲಮಂಗಲ ತಾಲೂಕು ಕಸಾಪ ಅಧ್ಯಕ್ಷ ಕಿಸಾನ್ ಪ್ರದೀಪ್ ಅವರು ಹಿರಿಯ ಕಲಾವಿದರಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಾಹಿತಿಗಳಾದ ಆನಂದ್ ವೈ ಮೌರ್ಯ, ಸದಾನಂದಆರಾಧ್ಯ, ಬಿ.ಪ್ರಕಾಶಮೂರ್ತಿ, ಮುಖಂಡರಾದ ಎನ್ , ಆರ್, ನಾಗರಾಜು, ಗ್ರಾಮ ಪಂಚಾಯತಿ ಸದಸ್ಯ ರಾಜು, ಜಾನಪದ ಕಲಾವಿದ ಸಿದ್ದಯ್ಯ ,ರಂಗನಿರ್ದೇಶಕ ಗಂಗರಾಜು, ಹಸಿರುವಳ್ಳಿ ಪ್ರಕಾಶ್ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….