ದೊಡ್ಡಬಳ್ಳಾಪುರ : ತಾಲೂಕಿನ ಹಿರಿಯ ಸಂಗೀತ ಕಲಾವಿದರಾದ ವಿದ್ವಾನ್ ಕೆ.ಎಲ್.ಶೇಷಾಚಾರ್ (86) ಭಾನುವಾರ ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಗಂಡು, ಒಂದು ಹೆಣ್ಣು ಮಕ್ಕಳು ಹಾಗೂ ಅಪಾರ ಶಿಷ್ಯ ವೃಂದದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ ಮುಕ್ತಿಧಾಮದಲ್ಲಿ ನೆರವೇರಿತು.
ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆ ಕರಗತ ಮಾಡಿಕೊಂಡಿದ್ದ ಕೆ.ಎಲ್.ಶೇಷಾಚಾರ್ ಅವರು ನೂರಾರು ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದರು. ಇವರ ಕಲಾಸೇವೆಯನ್ನು ಸ್ಮರಿಸಿ, ನಗರಸಭೆ, ಸುಸ್ವರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನಿಸಲಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….