ಬೆಂಗಳೂರು: ಗ್ರಾಮೀಣ ಜನರಿಗೆ ಸೇವೆಗಳನ್ನು ಒದಗಿಸಲು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ರಾಮ ಒನ್ ಯೋಜನೆಯನ್ನು ಅಧಿಕೃತವಾಗಿ ಆರಂಭಿಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿದೆ.
ಮೊದಲ ಹಂತದಲ್ಲಿ ಉಡುಪಿ ಸೇರಿದಂತೆ ಬೀದರ್, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ “ಗ್ರಾಮ ಒನ್’ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಜ.26ರಂದು ಚಾಲನೆ ನೀಡಲಿದ್ದಾರೆ.
ಗ್ರಾಮ ಒನ್: ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಹಿರಿಯ ನಾಗರಿಕರ ಗುರುತಿನ ಚೀಟಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್, ಕಾರ್ಮಿಕ ಇಲಾಖೆ ಸೇವೆಗಳು, ರಾಜ್ಯ ಪೊಲೀಸ್ ಇಲಾಖೆ ಸೇವೆಗಳು, ಕೃಷಿ ಇಲಾಖೆ ಸೇವೆಗಳು, ರೇಷ್ಮೆ ಇಲಾಖೆ ಸೇವೆಗಳು, ಪಶುಸಂಗೋಪನೆ ಇಲಾಖೆ ಸೇವೆಗಳು, ಮಾಹಿತಿ ಹಕ್ಕು ಕಾಯ್ದೆ ಸೇವೆಗಳು, ಸಿಎಂ ಪರಿಹಾರ ನಿಧಿ ಸೇವೆಗಳು ಸೇರಿದಂತೆ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಗ್ರಾಮದಲ್ಲಿಯೇ ನೀಡುವ ಗುರಿ ಹೊಂದಿದ್ದು ಪ್ರಸ್ತುತ ಪ್ರತಿ ಕೇಂದ್ರದಲ್ಲಿ 400ಕ್ಕೂ ಹೆಚ್ಚು ಸೇವೆಗಳು ದೊರೆಯಲಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….