ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಸರ್ಕಾರ, ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ (ಯು.ಎನ್.ಡಿ.ಪಿ) ಮತ್ತು ಕಾರ್ಪೊರೇಟ್ ಕಂಪನಿಗಳ ಸಿ.ಎಸ್.ಆರ್. ಸಹಭಾಗಿತ್ವದಲ್ಲಿ ಅಮೇರಿಕನ್ ಇಂಡಿಯಾ ಫೌಂಡೇಶನ್ ಸಂಸ್ಥೆಯ ಮೂಲಕ ದಾನಿಗಳಾದ ಮಾಸ್ಟರ್ ಕಾರ್ಡ್ ಇವರಿಂದ ಪ್ರಧಾನ ನೆರವು ದೊರೆತಿದ್ದು ಸಾರಾಪ್ಲಾಸ್ಟ್ ಸಂಸ್ಥೆಯು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಸಹಕಾರದೊಂದಿಗೆ ನಿರ್ಮಾಣ ಮಾಡಲಾದ 50 ಹಾಸಿಗೆಗಳ ಮೇಕ್‌ಶಿಫ್ಟ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭವನ್ನು 2022ರ ಜನವರಿ 24 ರಂದು ಬೆಳಿಗ್ಗೆ 10.15 ಗಂಟೆಗೆ ಹೊಸಕೋಟೆ ನಗರದ ಮೇಕ್‌ಶಿಫ್ಟ್ ಆಸ್ಪತ್ರೆಯ ಆವರಣದಲ್ಲಿ ಏರ್ಪಡಿಸಲಾಗಿದೆ.
ಮೇಕ್‌ಶಿಫ್ಟ್ ಆಸ್ಪತ್ರೆಯನ್ನು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಎನ್.ನಾಗರಾಜ್(ಎಂ.ಟಿ.ಬಿ) ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಉದ್ಘಾಟಿಸಲಿದ್ದು, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್‍ಕುಮಾರ್ ಬಚ್ಚೇಗೌಡ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ.ದೇವೆಗೌಡ, ಎಸ್.ರವಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್.ಟಿ.ಕೆ., ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ನ ಆಡಳಿತಾಧಿಕಾರಿ ಪಿ.ಹೇಮಲತಾ, ಹೊಸಕೋಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ನಾಗರಾಜು.ಸಿ, ನಗರಸಭೆಯ ಅಧ್ಯಕ್ಷರಾದ ಡಿ.ಕೆ.ನಾಗರಾಜ್, ಉಪಾಧ್ಯಕ್ಷರಾದ ಶೋಭಾ ಜುಂಜಪ್ಪ, ಸದಸ್ಯರಾದ ಆನಂದ್ ಸಿಂಗ್ ಹಾಗೂ ಹೊಸಕೋಟೆ ತಾಲ್ಲೂಕಿನ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಅವರು ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….