ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.24ರ ಬುಲೆಟಿನ್ ಅನ್ವಯ ಇಂದು ಜಿಲ್ಲೆಯಲ್ಲಿ ಹೊಸದಾಗಿ 1607 ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ 619 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ವರದಿಯನ್ವಯ ಹೊಸಕೋಟೆ ತಾಲೂಕಿನ 241 ಪುರುಷರು, 185 ಮಹಿಳೆಯರು ಸೇರಿ 426.
ದೇವನಹಳ್ಳಿ ತಾಲೂಕಿನ 107 ಪುರುಷರು, 94 ಮಹಿಳೆಯರು ಸೇರಿ 201.
ದೊಡ್ಡಬಳ್ಳಾಪುರ ತಾಲೂಕಿನ 151 ಪುರುಷರು,133 ಮಹಿಳೆಯರು ಸೇರಿ 284.
ನೆಲಮಂಗಲ ತಾಲೂಕಿನ 232 ಪುರುಷರು, 210 ಮಹಿಳೆಯರು ಸೇರಿ 442 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಉಳಿದಂತೆ ಬೆಂಗಳೂರು ಉತ್ತರ ಹಾಗೂ ಅನ್ಯ ಜಿಲ್ಲೆಯ 134 ಪುರುಷರು, 120 ಮಹಿಳೆಯರು ಸೇರಿ 254 ಮಂದಿಗೆ ಸೋಂಕು ತಗುಲಿದೆ.
ಮೃತರ ವರದಿ: ಹೊಸಕೋಟೆ ತಾಲೂಕಿನ 69 ವರ್ಷದ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7607ಕ್ಕೆ ಏರಿಕೆಯಾಗಿದೆ. ಅಲ್ಲದೆ 26730 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಅನ್ವಯ 2801 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
(ಆತಂಕ ಬೇಡಾ, ಮುಂಜಾಗ್ರತೆ ಇರಲಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….