ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ: ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟಲು ಸಹಕಾರಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಸಾಂಕ್ರಾಮಿಕದ ಸಂದರ್ಭದಲ್ಲಿ ಆರೋಗ್ಯ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಜನವರಿ 20 ರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪುನರಾರಂಭಿಸಲಾಗಿರುವ “ವೈದ್ಯರ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಡಿ, ವೈದ್ಯರ ತಂಡಗಳು ಜಿಲ್ಲೆಯ ವಿವಿಧ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜನವರಿ 20 ರಿಂದ ಇಲ್ಲಿಯವರೆಗೂ 66 ವೈದ್ಯಕೀಯ ತಂಡಗಳು, 44 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ 548 ಗ್ರಾಮಗಳಿಗೆ ಭೇಟಿ ನೀಡಿ, ಪರೀಕ್ಷೆ ನಡೆಸಲಾಗಿದೆ ಹಾಗೂ 1512 ಹೋಂ ಐಸೋಲೇಷನ್‌ನಲ್ಲಿರುವ ಮನೆಗಳಿಗೆ ಭೇಟಿ ನೀಡಿ, ಅಗತ್ಯವಿರುವವರಿಗೆ 1112 ಔಷಧಗಳ ಕಿಟ್‌ಗಳನ್ನು ವಿತರಿಸಲಾಗಿದೆ.

ಆರೋಗ್ಯ ತಪಾಸಣೆ ವೇಳೆ 1056 ಐಎಲ್‌ಐ/ ಸಾರಿ ಯ ಪ್ರಕರಣಗಳು, 1760 ಮಕ್ಕಳು, 64 ಅಪೌಷ್ಟಿಕ ಮಕ್ಕಳು ಕಂಡುಬಂದಿದ್ದು, 989 ಜನರಿಗೆ ಆರ್‌ಎಟಿ(RAT), 4106 ಜನರಿಗೆ ಆರ್‌ಟಿ‌ಪಿಸಿ‌ಆರ್(RTPCR) ಪರೀಕ್ಷೆ ಮಾಡಿ 91 ರೋಗಿಗಳನ್ನು ಆಸ್ಪತ್ರೆಗೆ ಸೇರಿಸಲು ಶಿಫಾರಸ್ಸು ಮಾಡಲಾಗಿದೆ.

4563 ಜನರಿಗೆ ಮೊದಲ ಡೋಸ್, 14242 ಜನರಿಗೆ ಎರಡನೇ ಡೋಸ್, 1048 ಜನರಿಗೆ ಮುನ್ನೆಚ್ಚರಿಕೆ ಡೋಸ್ ಹಾಗೂ 323 ಶಾಲಾ ಮಕ್ಕಳಿಗೆ(15-18 ವರ್ಷ) ಲಸಿಕೆ ನೀಡಲಾಗಿದೆ.

ಮನೆ ಮನೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಕೈಗೊಂಡ ಸಮಯದಲ್ಲಿ ದೀರ್ಘಕಾಲದ ಉಸಿರಾಟದ ಕಾಯಿಲೆಯ 65 ಜನರು, ಹೃದಯದ ಸಮಸ್ಯೆಯ 57 ಜನರು, ಮೂತ್ರಪಿಂಡ ಖಾಯಿಲೆಯ 31 ಜನರು, ಒಂದನೇ ವಿಧದ ಮಧುಮೇಹದ 126 ಜನರು, 29 ಹೆಚ್‌ಐವಿ ಸೋಂಕಿತರು, 52 ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳು, ಇತರ ಸಹ ಅನಾರೋಗ್ಯದ ಪರಿಸ್ಥಿತಿಯಲ್ಲಿರುವ (Other Co-morbid Conditions) 30 ಮಕ್ಕಳು ಹಾಗೂ 36 ಜನ್ಮಜಾತ ವೈಪರೀತ್ಯ (Congenital anomalies)ಗಳನ್ನು ಹೊಂದಿರುವ ಮಕ್ಕಳು ಕಂಡುಬಂದಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯ ನೀಡಲು ಕ್ರಮವಹಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಪ್ರಮುಖ ಪಾತ್ರವಹಿಸಲಿದ್ದು, ಜಿಲ್ಲೆಯ ಜನತೆ ಸಹಕಾರ ನೀಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!