ಉಪವಾಸ ಅಹಿಂಸೆಯ ಮೂಲಕ ಮಾತ್ರವಲ್ಲದೆ ರಕ್ತ ಕ್ರಾಂತಿಯ ಹೋರಾಟದ ಮೂಲಕವು ಸ್ವಾತಂತ್ರ್ಯ ದೊರೆತಿದೆ.: ವ್ಯಂಗ್ಯ ಚಿತ್ರಕಾರ ಹೆಚ್.ಬಿ.ಮಂಜುನಾಥ್

ದಾವಣಗೆರೆ: ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ದಾವಣಗೆರೆಯಲ್ಲಿಯೂ ಕೂಡ ಅನೇಕ ಜನರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಒಂದು ಅಗಳು ಅನ್ನದ ಹಿಂದೆ ಅನೇಕ ಜನ ರೈತ-ಕಾರ್ಮಿಕರ ಶ್ರಮ ಇರುತ್ತದೆ. ಅಂತೆಯೇ ಈಗ ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ದಿನಗಳ ಹಿಂದೆ ಅನೇಕ ಮಹನೀಯರ ತ್ಯಾಗ ಬಲಿದಾನ ಹೋರಾಟದ ಶ್ರಮವಿದೆ. ಕೇವಲ ಉಪವಾಸ ಅಹಿಂಸೆಯ ಮೂಲಕ ಮಾತ್ರವಲ್ಲದೆ ರಕ್ತ ಕ್ರಾಂತಿಯ ಹೋರಾಟದ ಮೂಲಕವು ಸ್ವಾತಂತ್ರ್ಯ ದೊರೆತಿದೆ ಎಂದು ಹಿರಿಯ ವ್ಯಂಗ್ಯ ಚಿತ್ರಕಾರ ಹೆಚ್.ಬಿ ಮಂಜುನಾಥ್ ಹೇಳಿದರು.

ಮಂಗಳವಾರ ನಗರದ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಆಚರಿಸುತ್ತಿರುವ ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೇವನಗರಿಯ ಕೊಡುಗೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿದ ಅವರು.

ಇತಿಹಾಸ ತಿಳಿಯದೆ ಇತಿಹಾಸವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂಬ ನುಡಿಗಟ್ಟಿನಂತೆ ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ದಾವಣಗೆರೆಯಲ್ಲಿಯೂ ಕೂಡ ಅನೇಕ ಜನರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಈ ಒಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ದಾವಣಗೆರೆಯ ಕೊಡುಗೆಗಳು ಕೂಡ ಅಗಾಧವಾಗಿವೆ. 1920 ಅμÉ್ಟೂತ್ತಿಗೆ ಸ್ವಾತಂತ್ರ್ಯ ಹೋರಾಟದ ಪರಿಕಲ್ಪನೆಯನ್ನು ಕರ್ನಾಟಕದ ಗಾಂಧಿ ಹರ್ಡೇಕರ್ ಮಂಜಪ್ಪನವರು ತಮ್ಮ ಧನುರ್ಧಾರಿ ಪತ್ರಿಕೆಯ ಮೂಲಕ ದಾವಣಗೆರೆಯಲ್ಲಿ ರೂಪಿಸಿದ್ದರು. ಧಾರವಾಡದ ಮೃತ್ಯುಂಜಯಪ್ಪ ನವರ ಜೊತೆಗೂಡಿ ಭಾರತ ರಾಷ್ಟ್ರೀಯತೆ ಎಂಬ ಪತ್ರಿಕೆಯ ಮೂಲಕವೂ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು. ಅಂಕೋಲಾ ಮತ್ತು ಕಾರವಾರ ಚಳುವಳಿಯ ಪ್ರಭಾವದಿಂದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಹುಟ್ಟಿಕೊಂಡರು. 1932 ರಲ್ಲಿ ವಿದೇಶಿ ವಸ್ತುಗಳನ್ನು ಮತ್ತು ಇಂಗ್ಲೆಂಡಿನಿಂದ ತಯಾರಾಗಿ ಬಂದಂತಹ ಬಟ್ಟೆಗಳನ್ನು ಕಾಯಿಪೇಟೆಯ ಬಳಿ ಹೋಳಿ ದಿನದಂದು ಸುಡುವ ಮುಖಾಂತರ ಸ್ವದೇಶಿ ಚಳುವಳಿಗೆ ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸೂಚಿಸಿದ್ದರು. ಕಾಸಲ್ ಶ್ರೀನಿವಾಸ್ ಶೆಟ್ಟಿ ಅವರು ಮಹಾತ್ಮ ಗಾಂಧಿಯವರಿಗೆ ಪತ್ರ ಬರೆದು ಅವರನ್ನು ದಾವಣಗೆರೆ ಕರೆತರುವ ಮೂಲಕ ಸ್ವಾತಂತ್ರ ಚಳುವಳಿಗೆ ಮತ್ತಷ್ಟು ಸ್ಪೂರ್ತಿ ತುಂಬಿದರು. ಗಾಂಧೀಜಿಯವರ ಭೇಟಿಯಿಂದ ದೊಡ್ಡಮಟ್ಟದಲ್ಲಿ ಹೋರಾಟಗಳು ಶುರುವಾದವು. ಇಂತಹ ಹೋರಾಟಗಳಲ್ಲಿ ಜಾತಿ-ಮತಭೇದವಿಲ್ಲದೆ ಅನೇಕ ಜನರು ಶಿಕ್ಷೆಗೆ ಒಳಗಾಗಿದ್ದಾರೆ. 1942 ರ ಭಾರತ ಬಿಟ್ಟು ತೊಲಗಿ ಚಳವಳಿಗೆ ಯುವಕರು ವಿದ್ಯಾರ್ಥಿಗಳು ಕೂಡ ಬಹುದೊಡ್ಡ ಪ್ರಮಾಣದಲ್ಲಿ ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧಾವಿಸಿದ್ದರು ಎಂದು ಮಾಹಿತಿ ನೀಡಿದರು.

ಸ್ವತಂತ್ರವಾದ ನಿರ್ಧಾರವನ್ನು ತೆಗೆದುಕೊಳ್ಳುವ ಅವಕಾಶ ಇಲ್ಲದೆ ಹೋದರೆ ಯಾವುದೇ ಸಮಾಜ, ಸಂಸಾರ, ವ್ಯಕ್ತಿ, ವ್ಯವಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಜಗತ್ತಿನ ಎಲ್ಲಾ ಆಧ್ಯಾತ್ಮಿಕ ಸಾಹಿತ್ಯಗಳಿಗಿಂತಲೂ ಮೊದಲು ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಚಾರವನ್ನು ನಮ್ಮ ವೇದ ಶಾಸ್ತ್ರ ಪುರಾಣ ಉಪನಿಷತ್ತುಗಳಲ್ಲಿ ತಿಳಿಸಲಾಗಿದೆ. ಸುಮಾರು ಎರಡು ನೂರು ವರ್ಷಗಳ ಕಾಲ ಭಾರತವು ಪರಕೀಯರ ಬಿಗಿಮುಷ್ಠಿಯಲ್ಲಿ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳದೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತಹ ಪರತಂತ್ರದ ಆಳ್ವಿಕೆಯಿಂದ ಹೊರಬರುವ ಮಾರ್ಗವಾಗಿ ರೂಪಿತವಾದದ್ದೇ ಭಾರತದ ಸ್ವಾತಂತ್ರ್ಯ ಚಳುವಳಿ.

ನಮ್ಮ ಮನೆಯೊಳಗೆ ಯಾವುದೇ ಧಾರ್ಮಿಕ ಆಚರಣೆಗಳನ್ನು ಪಾಲಿಸುತ್ತಿದ್ದರು ಕೂಡ ನಾವು ಹೊರಗಡೆ ಭಾರತೀಯರಾಗಿರಬೇಕು. ಏಕೆಂದರೆ ಭಾರತ ಅನೇಕ ಧರ್ಮ-ಜಾತಿ ಭಾμÉಗಳನ್ನು ಒಳಗೊಂಡಿರುವ  ನೈಜ ಪ್ರಜಾಪ್ರಭುತ್ವ ದೇಶ. ಗಲ್ಫ್ ರಾಷ್ಟ್ರಗಳಲ್ಲಿ ಮಹಿಳೆಯರಿಗೆ ಸ್ವತಂತ್ರ ಇಲ್ಲ ಅವುಗಳು ಮತಾಂಧ ರಾಷ್ಟ್ರಗಳು ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲ. ಆದರೆ ಭಾರತದಲ್ಲಿ ಎಲ್ಲಾ ಧರ್ಮ ಜಾತಿಗಳಿಗೂ ಕೂಡ ಸ್ವತಂತ್ರವಿದೆ ನಿಜವಾದ ಸ್ವಾತಂತ್ರ್ಯವನ್ನು ಭಾರತೀಯರು ಅನುಭವಿಸಿ ಬದುಕುತ್ತಿದ್ದಾರೆ ಎಂದರು.

ಬ್ರಿಟಿಷರ ಆಳ್ವಿಕೆಯ ಕಾಲಮಾನದಲ್ಲಿ ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಅನೇಕ ಪ್ರವಾಸಿ ತಾಣಗಳು ಇದ್ದರೂ ಬ್ರಿಟಿಷರು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಿಲ್ಲ ಏಕೆಂದರೆ ಬ್ರಿಟನ್ ಮಾತ್ರ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಸಾಧಿಸಬೇಕೆಂಬುದು ಅವರ ನಿಲುವಾಗಿತ್ತು. ಇಂತಹ ಅನೇಕ ದಬ್ಬಾಳಿಕೆಯಿಂದ ಕೊನೆಗೆ ಭಾರತ  ಸ್ವತಂತ್ರ ದೇಶವಾಗಿ ಹೊರಹೊಮ್ಮಿತು. ಈ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

ಉದ್ಘಾಟನೆಯ ನುಡಿಗಳನ್ನಾಡಿದ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರು ಪ್ರವಾಸಿ ತಾಣಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿಪಡಿಸುವ ಕಾರ್ಯವನ್ನು ಈಗಾಗಲೇ ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳು ಅಭಿವೃದ್ಧಿ ಹೊಂದಿದರೆ ಆ ಪ್ರದೇಶದಲ್ಲಿ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾಗುತ್ತವೆ. ಸರ್ಕಾರದ ಗಮನಕ್ಕೆ ಬಾರದ ಇರುವ ಪ್ರವಾಸಿ ತಾಣಗಳನ್ನು ಜನಸಾಮಾನ್ಯರು ಗುರುತಿಸಿ ಅವುಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದರೆ ಅಭಿವೃದ್ಧಿಪಡಿಸಲಾಗುವುದೆಂದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಪಾಲಾಕ್ಷಿ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಭಾರತ ರಾಷ್ಟ್ರ ಮಟ್ಟದಲ್ಲಿ ಪ್ರವಾಸಿ ದಿನವನ್ನು ಆಚರಿಸುತ್ತಿದೆ. ಈ ದಿನದ ಉದ್ದೇಶ ಪ್ರವಾಸಿ ತಾಣಗಳ ಬಗ್ಗೆ ಅರಿವು ಮೂಡಿಸಿ ಪ್ರವಾಸಿಗರನ್ನು ಆಕರ್ಷಿಸುವುದಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಇದೇ ವೇಳೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ತಿಪ್ಪಣ್ಣ.ಎ.ಕುಸಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಕ್ಸ್ ಮುನಿಪಲ್ ಪಿಯು ಕಾಲೇಜಿನ ಪ್ರಾಚಾರ್ಯ ಸುರೇಶ್, ಚಿತ್ರಗಿ ಶಿವಕುಮಾರ್, ರಾಜಶೇಖರ್ ರಫೀಕ್ ಉಪಸ್ಥಿತರಿದ್ದರು. ಉಪಸ್ಯಾಸಕರಾದ ಮಂಜಪ್ಪ ಹಿತ್ತಲಮನಿ ಸ್ವಾಗತಿಸಿದರೆ, ಅನ್ನಪೂರ್ಣ ಪಾಟೀಲ್ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!