ದೊಡ್ಡಬಳ್ಳಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದದ್ದು ,18 ವರ್ಷ ತುಂಬಿದ ಪ್ರತಿಯೊಬ್ಬ ಯುವಕರು, ಯುವತಿಯರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಹೇಳಿದರು.
ನಗರದ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಪಡೆದಿರುವ ಪವಿತ್ರ ಹಕ್ಕಾದ ಮತದಾನದ ಹಕ್ಕು, ರಾಜಕೀಯ ವ್ಯವಸ್ಥೆಯನ್ನು ನಿಯಂತ್ರಿಸುವುದಕ್ಕಾಗಿ ಭಾರತೀಯ ಸಂವಿಧಾನವು ಜನತೆಗೆ ನೀಡಿರುವ ಒಂದು ಬಲವಾದ ಅಸ್ತ್ರವಾಗಿದೆ, ಯುವಕರು ಹಣ-ಹೆಂಡ ಮೋಜು-ಮಸ್ತಿಗಳಿಗೆ ಒಳಗಾಗದೆ ಪ್ರಾಮಾಣಿಕವಾಗಿ ಮತ ಚಲಾಯಿಸಬೇಕು ಎಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸನ್ನದ್ದ ಟ್ರಸ್ಟ್ ನ ಅಧ್ಯಕ್ಷ ಶ್ರೀ ಭಾಸ್ಕರ್ ಮಾತನಾಡಿ, ಗ್ರಾಮೀಣ ಪ್ರದೇಶಗಳಿಗಿಂತ, ನಗರ ಪ್ರದೇಶಗಳಲ್ಲಿ ಅನಕ್ಷರಸ್ಥರಿಗಿಂತ, ಅಕ್ಷರಸ್ಥರೇ ಹೆಚ್ಚಾಗಿ ಮತದಾನವನ್ನು ನಿರ್ಲಕ್ಷಿಸುತ್ತಿರುವುದು ಬೇಸರದ ಸಂಗತಿ,ಯಾವುದೇ ಮತದಾರ ಮತದಾನದಿಂದ ಹೊರಗೆ ಉಳಿಯಬಾರದು ಎಂದರು.
ಪ್ರಾಧ್ಯಾಪಕರಾದ ಕೆ.ದಕ್ಷಿಣಾಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಮತದಾರ ಯುವಕರು ಜವಾಬ್ದಾರಿಯುತವಾಗಿ, ವಿವೇಚನೆಯಿಂದ, ಜಾಗೃತಿಯಿಂದ, ಪ್ರಾಮಾಣಿಕವಾಗಿ ಮತಚಲಾಯಿಸಿದರೆ ಉತ್ತಮ ಆಡಳಿತ ಬರಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಚೈತ್ರ, ಪ್ರಕಾಶ್ ಶ್ರೀನಿವಾಸ್, ಲಕ್ಷ್ಮೀಶ, ಅರಸೇಗೌಡ ಚೇತನ್ ಕುಮಾರ್, ನಂದನ, ಗ್ರಂಥಪಾಲಕಿಯಾದ ಪ್ರೇಮ ಮತ್ತಿತರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….