ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಧ್ವಜವಂದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ  ಪೊಲೀಸ್ ಇಲಾಖೆ, ಭಾರತ ಸೇವಾದಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ಜಿಲ್ಲಾ ಮೀಸಲು ಸಶಸ್ತ್ರ ಪಡೆಯ ಕವಾಯತು ಮೈದಾನದಲ್ಲಿ ದಾವಣಗೆರೆಯ ವಿವಿಧ ಇಲಾಖೆಯ ಸಿಬ್ಬಂದಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಧ್ವಜವಂದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ವಲಯ  ಸಂಘಟಕ ಎಂ. ಅಣ್ಣಯ್ಯರವರು ಶಿಬಿರಾರ್ಥಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಇತಿಹಾಸ ಹಾಗೂ ಧ್ವಜ ಸಂಹಿತೆಯ ಬಗ್ಗೆ, ಧ್ವಜ ಸಂರಕ್ಷಣೆಯ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಕಚೇರಿಗಳಲ್ಲಿ ಧ್ವಜವಂದನೆಯನ್ನು ನೇರವೇರಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳುವ ಕುರಿತು ಮಾಹಿತಿ ತಿಳಿಸಿದರು.

ಡಿವೈಎಸ್‍ಪಿ ಪ್ರಕಾಶ್ ರಾಷ್ಟ್ರಧ್ವಜ ಅರಳಿಸಿ ಗೌರವ ವಂದನೆ ಸಲ್ಲಿಸಿದ ಬಳಿಕ ಮಾತನಾಡಿ, ಸಿಬ್ಬಂದಿಗಳಿಗೆ ಸಾರ್ವಜನಿಕರಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಇರುವುದರಿಂದ ರಾಷ್ಟ್ರೀಯ ಹಬ್ಬಗಳಲ್ಲಿ ಧ್ವಜವನ್ನು ಸರಿಯಾಗಿ ಕಟ್ಟಲು ಬಾರದೆ ತಲೆಕೆಳಗಾಗಿ ಹಾರಾಟ ಮಾಡಿರುವುದನ್ನು ನಾವು ಗಮನಿಸಿದ್ದೇವೆ, ಇದು ರಾಷ್ಟ್ರಧ್ವಜಕ್ಕೆ, ರಾಷ್ಟ್ರಕ್ಕೆ ಆಗುವ ಅಪಮಾನವಾಗಿದೆ. ಇಂತಹ ತಪ್ಪುಗಳನ್ನು ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಜಿಲ್ಲಾಡಳಿತವು ರಾಷ್ಟ್ರಧ್ವಜ ವಂದನೆಯ ಕುರಿತು ಶಿಬಿರಗಳನ್ನು ಆಯೋಜಿಸಲು ಮುಂದಾಗಿದೆ.

ಭಾರತ ಸೇವಾದಳವು ದಾವಣಗೆರೆಯಲ್ಲಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಸಂಬಂಧಿಸಿದಂತೆ ಪ್ರತಿವರ್ಷ ತರಬೇತಿಗಳನ್ನು ನಡೆಸಿಕೊಂಡು ಬರುತ್ತಿದೆ. ಜಿಲ್ಲೆಯ  ನೌಕರರು, ವಿವಿಧ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ವರ್ಗದವರು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಧ್ವಜವನ್ನು ಕಟ್ಟುವ ಹಾಗೂ ಇಳಿಸುವ ಬಗ್ಗೆ ಪ್ರತ್ಯಕ್ಷ ಶಿಕ್ಷಣವನ್ನು ಪಡೆದುಕೊಂಡು ತಮ್ಮ ತಮ್ಮ ಕಚೇರಿಗಳಲ್ಲಿ ಶಿಸ್ತುಬದ್ಧವಾಗಿ ರಾಷ್ಟ್ರೀಯ ಹಬ್ಬಗಳನ್ನು ಆಚರಣೆ ಮಾಡುವುದು ಉತ್ತಮ. ಇಂತಹ ಶಿಬಿರಗಳು ಇನ್ನೂ ಹೆಚ್ಚಾಗಿ ನಡೆಯಬೇಕಾಗಿದೆ ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಗಳನ್ನು ಸಂಘಟಿಸಿಕೊಂಡು ತರಬೇತಿ ಕಾರ್ಯಾಗಾರ ಮಾಡಲಾಗುವುದು ಎಂದು ತಿಳಿಸಿದರು.

ಸಂಪನ್ಮೂಲ ಶಿಕ್ಷಕರಾದ ಟಿ.ಎಸ್.ಕುಮಾರಸ್ವಾಮಿ, ಎ.ಆರ್.ಗೋಪಾಲಪ್ಪ, ಡಾ.ಲಕ್ಷ್ಮಣ್ ರವರು ಶಿಬಿರಾರ್ಥಿಗಳ ತಂಡಗಳನ್ನು ರಚನೆ ಮಾಡಿಕೊಂಡು ಅವರಿಗೆ ರಾಷ್ಟ್ರಧ್ವಜ ಕಟ್ಟುವ ಮತ್ತು ಇಳಿಸುವ ಹಾಗೂ ಮಡಿಸುವ ಪ್ರತ್ಯಕ್ಷ ಶಿಕ್ಷಣವನ್ನು ನೀಡಿದರು. ಧ್ವಜ ಮತ್ತು ಧ್ವಜಾವಂದನೆಗೆ ಸಂಬಂಧಿಸಿದಂತೆ ಶಿಬಿರಾರ್ಥಿಗಳಲ್ಲಿದ್ದ ಅನೇಕ ಪ್ರಶ್ನೆಗಳು ಮತ್ತು ಗೊಂದಲಗಳಿಗೆ ಉತ್ತರ ಸಹ ನೀಡಿದರು.

ಶಿಬಿರದಲ್ಲಿ ದಾವಣಗೆರೆಯ ನ್ಯಾಯಾಲಯಗಳ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಆರ್ ಎಸ್‍ಐ ಚನ್ನಪ್ಪ ಪೂಜಾರ್ ರವರು  ಸ್ವಾಗತಿಸಿದರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಪಿ.ಠಾಕೂರ್ ಕಾರ್ಯಕ್ರಮವನ್ನು ನಿರೂಪಿಸಿದರೆ, ಆರ್ ಎಸ್‍ಐ ಅಣ್ಣಿಗೇರಿ ವಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!